ಬಳ್ಳಾರಿ ಬ್ಯಾನರ್ ಘರ್ಷಣೆ: ಅಧಿಕಾರ ಸ್ವೀಕರಿಸಿದ ಎರಡೇ ದಿನಕ್ಕೆ ಎಸ್‌ಪಿ ಪವನ್ ನೆಟ್ಟೂರ್ ಅಮಾನತು
ಬಳ್ಳಾರಿ: ನಗರದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಬ್ಯಾನರ್ ಗಲಾಟೆಯನ್ನು ನಿಯಂತ್ರಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪವನ್ ನೆಟ್ಟೂರ್ ಅವರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ರಾಜ್ಯ ಸರ್ಕಾರ ಶುಕ್ರವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಶೇಷವೆಂದರೆ, ಬುಧವಾರವಷ್ಟೇ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶದನ್ವಯ ಬಳ್ಳಾರಿಗೆ ನೇಮಕಗೊಂಡಿದ್ದ ನೆಟ್ಟೂರ್ ಅವರು ಗುರುವಾರ (ಜ. 1) ಅಧಿಕಾರ ಸ್ವೀಕರಿಸಿದ್ದರು. ಅಧಿಕಾರ ವಹಿಸಿಕೊಂಡ ಮೊದಲ ದಿನವೇ ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣದ…

