ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಭಕ್ತರಿಗೆ ಮೂಲಸೌಕರ್ಯ ಕೊರತೆ: ಸಮಗ್ರ ಅಭಿವೃದ್ಧಿಗೆ ನವಯುಗ ಸಂಘಟನೆ ಆಗ್ರಹ
ಬೆಳಗಾವಿ: ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸವದತ್ತಿ ಶ್ರೀ ಯಲ್ಲಮ್ಮನ ಗುಡ್ಡಕ್ಕೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಕನಿಷ್ಠ ಮೂಲಸೌಕರ್ಯಗಳೂ ಇಲ್ಲದೆ ತೀವ್ರ ತೊಂದರೆಯಾಗುತ್ತಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಹುಬ್ಬಳ್ಳಿಯ ‘ನವಯುಗ ಸಂಘಟನೆ’ಯು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಪ್ರತಿ ಹುಣ್ಣಿಮೆ ಹಾಗೂ ಅಮವಾಸ್ಯೆಯಂದು ಲಕ್ಷಾಂತರ ಜನ ಸೇರುವ ಈ ಪುಣ್ಯಕ್ಷೇತ್ರದಲ್ಲಿ ವ್ಯವಸ್ಥೆಗಳು ಸಂಪೂರ್ಣ ಹದಗೆಟ್ಟಿವೆ ಎಂದು ಸಂಘಟನೆಯು ಆಕ್ರೋಶ ವ್ಯಕ್ತಪಡಿಸಿದೆ. ಜೋಗುಳ ಭಾವಿ ಹಾಗೂ ಸತ್ಯವ್ವಾ ದೇವಸ್ಥಾನದ ಬಳಿ ಮಹಿಳಾ ಭಕ್ತರಿಗೆ…

