ಬೆಳಗಾವಿ ಏತ ನೀರಾವರಿ ಯೋಜನೆಗಳ ಪ್ರಗತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪರಿಶೀಲನಾ ಸಭೆ
ಬೆಳಗಾವಿ, ಡಿ. 10: ಬೆಳಗಾವಿ ಜಿಲ್ಲೆಯ ಪ್ರಮುಖ ಏತ ನೀರಾವರಿ ಯೋಜನೆಗಳ ಪ್ರಗತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುದುವಾರದಂದು (ಡಿ.10) ಸಭೆ ನಡೆಸಿ ಪರಿಶೀಲನೆ ನಡೆಸಿದರು. ಕಾಗವಾಡ ತಾಲ್ಲೂಕಿನ ಬಸವೇಶ್ವರ (ಕೆಂಪವಾಡ), ರಾಮದುರ್ಗ ತಾಲ್ಲೂಕಿನ ವೀರಭದ್ರೇಶ್ವರ ಮತ್ತು ಸಾಲಾಪುರ ಏತ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬಸವೇಶ್ವರ ಏತ ನೀರಾವರಿ ಯೋಜನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ 22 ಬರಪೀಡಿತ ಗ್ರಾಮಗಳ 27,462 ಹೆಕ್ಟೇರ್ ಪ್ರದೇಶಗಳಿಗೆ…

