ಆರೋಗ್ಯ ಕ್ರಾಂತಿ ಗುರಿ: ಪ್ರತಿ ಜಿಲ್ಲೆಗೆ ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ – ಸಿಎಂ ಸಿದ್ದರಾಮಯ್ಯ
ಬೆಳಗಾವಿ: ರಾಜ್ಯದ ಜನರಿಗೆ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತಿ ಜಿಲ್ಲೆಗೂ ಕಡ್ಡಾಯವಾಗಿ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ತಮ್ಮ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಬೆಳಗಾವಿಯಲ್ಲಿ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು, “ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ ಮತ್ತು ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಸಿಗಬೇಕು….

