ಕೊಟ್ಟೂರು ಬೆಚ್ಚಿಬೀಳಿಸಿದ ಭೀಕರ ತ್ರಿವಳಿ ಕೊಲೆ: ಮನೆಯ ಹಾಲ್‌ನಲ್ಲೇ ತಂದೆ-ತಾಯಿ-ತಂಗಿ ಶವ ಹೂತಿಟ್ಟ ನರಹಂತಕ ಮಗ!

​ವಿಜಯನಗರ: ಕೊಟ್ಟೂರು ಪಟ್ಟಣದಲ್ಲಿ ಬೆಚ್ಚಿಬೀಳಿಸುವಂತ ಭೀಕರ ತ್ರಿವಳಿ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಹೆತ್ತ ತಂದೆ-ತಾಯಿ ಹಾಗೂ ತಂಗಿಯನ್ನು ಭೀಕರವಾಗಿ ಹತ್ಯೆಗೈದ ನರಹಂತಕ ಮಗ, ಮನೆಯ ಹಾಲ್‌ನಲ್ಲೇ ಶವಗಳನ್ನು ಹೂತಿಟ್ಟು ವಿಕೃತಿ ಮೆರೆದಿದ್ದಾನೆ. ಬೆಂಗಳೂರಿನ ತಿಲಕ್ ನಗರ ಠಾಣೆ ಪೊಲೀಸರು ಹಾಗೂ ಸ್ಥಳೀಯ ಅಧಿಕಾರಿಗಳ ನೇತೃತ್ವದಲ್ಲಿ ಶನಿವಾರ ನಡೆಸಿದ ಕಾರ್ಯಾಚರಣೆಯಲ್ಲಿ ಒಂದೇ ಕುಣಿಯಲ್ಲಿ ಹೂತಿಟ್ಟಿದ್ದ ಮೂರು ಮೃತದೇಹಗಳು ಪತ್ತೆಯಾಗಿವೆ. ಆರೋಪಿ ಅಕ್ಷಯ್ ತಂದೆ ಭೀಮರಾವ್ (50), ತಾಯಿ ಜಯಲಕ್ಷ್ಮಿ (45) ಮತ್ತು ತಂಗಿ ಎಚ್.ಅಮೃತಾ (17) ಅವರನ್ನು…

Read More

ಪರಪ್ಪನ ಅಗ್ರಹಾರ, ಕಬ್ಬಿನ ದರ, ಆರ್.ಎಸ್.ಎಸ್. ಬಗ್ಗೆ ಹರಪನಹಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ವಿಜಯಪೂರ:(ಹರಪನಹಳ್ಳಿ): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವಿವಾರದಂದು ಹರಪನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪರಪ್ಪನ ಅಗ್ರಹಾರ ಜೈಲಿನಲ್ಲಿನ ಐಷಾರಾಮಿ ಸವಲತ್ತುಗಳು, ಕಬ್ಬಿನ ಬೆಲೆ ವಿವಾದ, ಆರ್.ಎಸ್.ಎಸ್. ಸಮಾವೇಶಕ್ಕೆ ಅನುಮತಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಪ್ರಮುಖ ಹೇಳಿಕೆಗಳನ್ನು ನೀಡಿದರು. ​ಪರಪ್ಪನ ಅಗ್ರಹಾರದ ಸವಲತ್ತುಗಳ ಕುರಿತು ಗಂಭೀರ ಕ್ರಮ ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ಸರ್ಕಾರದ ಗಮನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಈ ಅವ್ಯವಹಾರಕ್ಕೆ ಸಂಬಂಧಿಸಿದ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು ಎಂದು…

Read More

ಕೂಡ್ಲಿಗಿಯಲ್ಲಿ ₹870 ಕೋಟಿಯ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

ಕೂಡ್ಲಿಗಿ (ವಿಜಯನಗರ): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ₹870 ಕೋಟಿ ವೆಚ್ಚದ 74 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು. ಮುಖ್ಯಮಂತ್ರಿಗಳು ಮಾತನಾಡುತ್ತಾ, “ಈ ಯೋಜನೆಯಿಂದ 1,70,000 ಜನರಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ. ಜೊತೆಗೆ, ಕೂಡ್ಲಿಗಿಯ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಶ್ರಮಿಸಿದ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರಾಗಿದ್ದಾರೆ. ಬರಡು…

Read More

ಪಂಚಮಸಾಲಿ ಪೀಠದಿಂದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ: ಭಕ್ತರ ಮನಸ್ಸಿಗೆ ನೋವು,

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಹೋರಾಟದ ನೇತೃತ್ವ ವಹಿಸಿ ಸಮುದಾಯದ ಪ್ರಮುಖ ಧ್ವನಿಯಾಗಿದ್ದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ. ಈ ಮಹತ್ವದ ಬೆಳವಣಿಗೆಯಿಂದ ಭಕ್ತರು ಮತ್ತು ಅನುಯಾಯಿಗಳಿಗೆ ತೀವ್ರ ನೋವಾಗಿದ್ದು, ಸಮಾಜದಲ್ಲಿ ವ್ಯಾಪಕ ಸಂಚಲನ ಸೃಷ್ಟಿಯಾಗಿದೆ. ಪೀಠದ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹಾಗೂ ಕಾರ್ಯದರ್ಶಿ ನೀಲಕಂಠ ಅಸೂಟಿ ಸೇರಿದಂತೆ ಹಲವು ಮುಖಂಡರು ಇತ್ತೀಚೆಗೆ ನಡೆಸಿದ ಕಾರ್ಯಕಾರಿಣಿ ಸಭೆಯಲ್ಲಿ ಈ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಸ್ವಾಮೀಜಿ ವಿರುದ್ಧ ಅಕ್ರಮ ಆಸ್ತಿ…

Read More

ಗೃಹಲಕ್ಷ್ಮಿ ಯೋಜನೆಯ ಹಣದಿಂದ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಭಾವಚಿತ್ರ ಕೆತ್ತಿಸಿದ ದಂಪತಿ

ವಿಜಯನಗರ (ಕಾನಾಹೊಸಹಳ್ಳಿ )ರಾಜ್ಯ ಸರ್ಕಾರದ ಜನಪ್ರಿಯ ‘ಗೃಹಲಕ್ಷ್ಮಿ’ ಯೋಜನೆಯಿಂದ ದೊರೆತ ಹಣದಲ್ಲಿ, ಒಂದು ಬಡ ದಂಪತಿ ತಮ್ಮ ಮನೆಯ ಮುಖ್ಯ ಬಾಗಿಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರ ಮತ್ತು ಹೆಸರನ್ನು ಕೆತ್ತಿಸಿ ಅಪಾರ ಅಭಿಮಾನ ಮೆರೆದಿದ್ದಾರೆ. ವಿಜಯನಗರ ಜಿಲ್ಲೆಯ ಗಡಿ ಗ್ರಾಮವಾದ ಕೆಂಚಮಲ್ಲನಹಳ್ಳಿಯಲ್ಲಿ ನಡೆದ ಈ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ₹28 ಸಾವಿರ ವೆಚ್ಚದ ಬಾಗಿಲುಗ್ರಾಮದ ಕೆ.ಎಂ. ತಿಪ್ಪೇಸ್ವಾಮಿ ಮತ್ತು ಅವರ ಪತ್ನಿ ಪಾರ್ವತಮ್ಮ ಈ ವಿಶಿಷ್ಟ ಕಾರ್ಯ ಮಾಡಿದ್ದಾರೆ. ಪಾರ್ವತಮ್ಮ ಅವರು…

Read More

ಚಡಚಣ ಎಸ್‌ಬಿಐ ಬ್ಯಾಂಕ್‌ಗೆ ದರೋಡೆಕೋರರ ಲೂಟಿ: 50 ಕೆಜಿ ಚಿನ್ನ, ₹ 18 ಕೋಟಿ ದೋಚಿ ಪರಾರಿ

ವಿಜಯಪುರ: ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಗೆ ಮಂಗಳವಾರ ಸಂಜೆ ದರೋಡೆಕೋರರು ನುಗ್ಗಿ, ಸುಮಾರು 50 ಕೆಜಿ ಚಿನ್ನಾಭರಣ ಹಾಗೂ ₹ 18 ಕೋಟಿ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಮಿಲಿಟರಿ ಸಮವಸ್ತ್ರಧಾರಿಗಳಿಂದ ದರೋಡೆಪಟ್ಟಣದ ಪಂಢರಪುರ ಮುಖ್ಯರಸ್ತೆಯಲ್ಲಿ ಜನನಿಬಿಡ ಪ್ರದೇಶದಲ್ಲಿರುವ ಎಸ್‌ಬಿಐ ಶಾಖೆಯಲ್ಲಿ ಸಂಜೆ 7 ಗಂಟೆ ಸುಮಾರಿಗೆ ಸಿಬ್ಬಂದಿ ಕೆಲಸ ಮುಗಿಸಿ ಮನೆಗೆ ತೆರಳಲು ಸಿದ್ಧವಾಗುತ್ತಿದ್ದಾಗ, ಏಳೆಂಟು ಮಂದಿ ಮುಸುಕುಧಾರಿ ದರೋಡೆಕೋರರು ಬ್ಯಾಂಕಿನ ಮುಖ್ಯ ದ್ವಾರದಿಂದ ಒಳನುಗ್ಗಿದ್ದಾರೆ. ಮಿಲಿಟರಿ…

Read More

ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆಗೆ ಯತ್ನಿಸಿದ ಪತ್ನಿ ಬಂಧನ

ವಿಜಯಪುರ: ಗಂಡ ಮತ್ತು ಇಬ್ಬರು ಮಕ್ಕಳಿದ್ದರೂ, ಪ್ರಿಯಕರನೊಂದಿಗೆ ಅಕ್ರಮ ಸಂಬಂಧ ಮುಂದುವರಿಸಿಕೊಂಡು ಗಂಡನನ್ನೇ ಕೊಲ್ಲಲು ಪತ್ನಿ ಯತ್ನಿಸಿದ ಆಘಾತಕಾರಿ ಘಟನೆ ಇಂಡಿ ಪಟ್ಟಣದ ಅಕ್ಕಮಹಾದೇವಿ ನಗರದಲ್ಲಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ಗಂಡ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಸೆಪ್ಟೆಂಬರ್ 1ರಂದು ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬಹಿರಂಗವಾಗಿದೆ. ಬೀರಪ್ಪ ಮಾಯಪ್ಪ ಪೂಜಾರಿ (36) ಎಂಬವರು ಪತ್ನಿ ಸುನಂದಾ ಮತ್ತು ಇಬ್ಬರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸುನಂದಾ, ಸಿದ್ದಪ್ಪ ಕ್ಯಾತಕೇರಿ ಎಂಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು…

Read More

ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಆಗ್ರಹ: ಸರ್ಕಾರಕ್ಕೆ ಹೋರಾಟ ಸಮಿತಿಯ ಎಚ್ಚರಿಕೆ

ವಿಜಯಪುರ: ಆಲಮಟ್ಟಿಗೆ ಬಾಗಿನ ಅರ್ಪಿಸಲು ಆಗಮಿಸುತ್ತಿರುವ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಭರವಸೆ ನೀಡಬೇಕು ಎಂದು ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಒತ್ತಾಯಿಸಿದೆ. ಪಿಪಿಪಿ (ಸಾರ್ವಜನಿಕ-ಖಾಸಗಿ ಸಹಭಾಗಿತ್ವ) ಮಾದರಿಯನ್ನು ಕೈಬಿಟ್ಟು, ಸಂಪೂರ್ಣವಾಗಿ ಸರ್ಕಾರವೇ ಕಾಲೇಜು ನಿರ್ಮಾಣದ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ಸಮಿತಿಯ ಸದಸ್ಯರು ಆಗ್ರಹಿಸಿದ್ದಾರೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಸದಸ್ಯ ಅರವಿಂದ ಕುಲಕರ್ಣಿ, “ಪಿಪಿಪಿ ಮಾದರಿಯು ವಿದ್ಯಾರ್ಥಿಗಳಿಗೆ ಹೊರೆಯಾಗಲಿದೆ. ಸರ್ಕಾರವೇ ಸಂಪೂರ್ಣ ಹಣಕಾಸು ಜವಾಬ್ದಾರಿ ವಹಿಸಿಕೊಂಡು…

Read More

ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ಗ್ರಾಪಂ ಮಾಜಿ ಅಧ್ಯಕ್ಷನ ಹತ್ಯೆ

ವಿಜಯಪುರ: ಚಡಚಣ: (ಸೆಪ್ಟೆಂಬರ್ 4, 2025): ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಭೀಮಾ ತೀರದ ರೌಡಿಸಂ ಮತ್ತೆ ಮುನ್ನಲೆಗೆ ಬಂದಿದ್ದು, ಕ್ಷೌರದ ಅಂಗಡಿಯಲ್ಲೇ ಗ್ರಾಪಂ ಮಾಜಿ ಅಧ್ಯಕ್ಷ ಭೀಮನಗೌಡ ಬಿರಾದಾರ (40) ಅವರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆ ಬುಧವಾರ ಬೆಳಿಗ್ಗೆ ನಡೆದಿದ್ದು, ಹತ್ಯೆಯಾದ ಕೆಲವೇ ಗಂಟೆಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹತ್ಯೆಗೆ ವೈಯಕ್ತಿಕ ದ್ವೇಷ, ಹಣಕಾಸಿನ ವಿವಾದ ಹಾಗೂ ರಾಜಕೀಯ ಎಂಬ ಸಂಶಾತ್ಮಕಬಕಾರಣಗಳು ಪ್ರಮುಖವಾಗಿವೆ ಎಂದು…

Read More

ಡಿಸಿಎಂ ಡಿ.ಕೆ.ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿದೆ’: ಶಾಸಕ ಯತ್ನಾಳ್‌ರಿಂದ ಹೊಸ ಬಾಂಬ್

ವಿಜಯಪುರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿಯೊಂದಿಗೆ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಮತ್ತು ಬಿಜೆಪಿ ಸೇರುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡಿ.ಕೆ. ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿದೆ. ಅವರು ಈಗಾಗಲೇ ದೆಹಲಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಜೊತೆ ಸೇರಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಒಟ್ಟು 60 ರಿಂದ 70 ಕಾಂಗ್ರೆಸ್ ಶಾಸಕರನ್ನು ಕರೆತಂದು ಸರ್ಕಾರ…

Read More