ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್‌ನಿಂದ ಬಿಗ್ ರಿಲೀಫ್‌; ಜಾಮೀನು ಮಂಜೂರು

​ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಾಗೂ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿಗಳು ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಸಂಜಯ್ ಕರೋಲ್ ನೇತೃತ್ವದ ದ್ವಿಸದಸ್ಯ ಪೀಠವು ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿ ಅಂತಿಮವಾಗಿ ಜಾಮೀನು ನೀಡುವ ಆದೇಶ ಹೊರಡಿಸಿತು. ವಿನಯ್ ಕುಲಕರ್ಣಿ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಫ್ರಾ ಅವರು ವಾದ ಮಂಡಿಸಿ, ಪ್ರಕರಣದ ಬಹುತೇಕ ಸಾಕ್ಷ್ಯಗಳ ವಿಚಾರಣೆ ಈಗಾಗಲೇ ಪೂರ್ಣಗೊಂಡಿರುವುದರಿಂದ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಲು ಅಥವಾ ಸಾಕ್ಷ್ಯ ನಾಶಪಡಿಸಲು ಸಾಧ್ಯವಿಲ್ಲ ಎಂದು ಪೀಠದ…

Read More