ಮುಂಡಗೋಡ ಮೀಟರ್ ಬಡ್ಡಿ ಕಿಂಗ್‌ಪಿನ್ ಹತ್ಯೆ ರಹಸ್ಯ ಬಯಲು: ಐವರು ಸುಪಾರಿ ಹಂತಕರ ಬಂಧನ, ಪಿಸ್ತೂಲ್ ವಶ

​ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಸಂಚಲನ ಮೂಡಿಸಿದ್ದ ಮೀಟರ್ ಬಡ್ಡಿ ದಂಧೆಯ ಕಿಂಗ್‌ಪಿನ್ ಜಮೀರ್ ಅಹ್ಮದ್ ದರ್ಗಾವಾಲೆ ಕೊಲೆ ಪ್ರಕರಣದ ಸುರುಳಿ ಬಿಚ್ಚಿಕೊಂಡಿದೆ. ಬಡ್ಡಿ ದಂಧೆಯ ವೃತ್ತಿ ವೈಷಮ್ಯಕ್ಕಾಗಿ ಸುಪಾರಿ ನೀಡಿ ಈ ಹತ್ಯೆ ಮಾಡಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನ ನೆಲಮಂಗಲದ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ಈ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಮುಂಡಗೋಡಿನ ನಿವಾಸಿ ಮಂಜುನಾಥ ಕಾಜಗಾರ ಅಲಿಯಾಸ್ ಮಂಜ್ಯಾ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮಂಜುನಾಥ ಹಾಗೂ ಮೃತ ಜಮೀರ್…

Read More

ಹಿರೇನರ್ತಿ ಗ್ರಾಮದಲ್ಲಿ ಜಾಗದ ಕಿರಿಕ್: ಕರಿಯಪ್ಪನ ಮೇಲೆ ಭೀಕರ ಹಲ್ಲೆ

ಕುಂದಗೋಳ: ತಾಲ್ಲೂಕಿನ ಹಿರೇನರ್ತಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ತಲೆದೋರಿದ ಹಳೆಯ ದ್ವೇಷವೊಂದು ವಿಕೋಪಕ್ಕೆ ತಿರುಗಿದ್ದು, ಒಂದೇ ಮನೆತನದವರ ನಡುವಿನ ಜಗಳದಲ್ಲಿ ಮುಂದುವರೆದು ಹಲ್ಲೆಯಲ್ಲಿ ಅಂತ್ಯಗೊಂಡಿದೆ. ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಈ ಭೀಕರ ಗಲಾಟೆಯಲ್ಲಿ ಕರಿಯಪ್ಪಗೌಡ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಮವಾರ ಮಧ್ಯಾಹ್ನದ ವೇಳೆಗೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿ. ಜಾಗದ ವಿಷಯವಾಗಿ ಮಾತಿಗೆ ಮಾತು ಬೆಳೆದು, ಒಂದೇ ಮನೆತನದ ಅಣ್ಣತಮ್ಮಂದಿರಾದ ಪ್ರಜ್ವಲ್ ಗೌಡ , ಸಿದ್ದನಗೌಡ ಹಾಗೂ ಶಿವನಗೌಡ…

Read More

ವಿಜಯನಗರ: ಡಣಾಪುರ ಬಳಿ ಭೀಕರ ಸರಣಿ ಅಪಘಾತ; ಒಂದೇ ಕುಟುಂಬದ ಮೂವರು ಸೇರಿ ನಾಲ್ವರ ಸಾವು

ವಿಜಯನಗರ: ಜಿಲ್ಲೆಯ ಡಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ​ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕಿತ್ತೂರು ಗ್ರಾಮದ ನಾಗಪ್ಪ (56), ಇವರ ಪುತ್ರ ಕೊಟ್ರೇಶ್ (22), ಪುತ್ರಿ ಸುಜಾತಾ (35) ಹಾಗೂ ತಿಮ್ಮಲಾಪುರ ಗ್ರಾಮದ ದುರುಗಪ್ಪ (55) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕಿತ್ತೂರು ಗ್ರಾಮದ ಈ ನಾಲ್ವರು ಎರಡು…

Read More

ಅಮಾವಾಸ್ಯೆ ದರ್ಶನ ಮುಗಿಸಿ ಬರುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಸಜೀವ ದಹನ: ರಾಜ್ಯವನ್ನೇ ನಡುಗಿಸಿದ ಭೀಕರ ದುರಂತ!

​ಯಾದಗಿರಿ: ದೈವದರ್ಶನ ಮುಗಿಸಿ ಮರಳುತ್ತಿದ್ದ ಕುಟುಂಬವೊಂದಕ್ಕೆ ವಿಧಿ ಅಕ್ಷರಶಃ ಮೃತ್ಯುರೂಪಿಯಾಗಿ ಅಪ್ಪಳಿಸಿದೆ. ಇಂದು ಬೆಳಿಗ್ಗೆ ಸುಮಾರು 9:45ರ ಸುಮಾರಿಗೆ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯ ಭೀಕರತೆಗೆ ಒಂದೇ ಕುಟುಂಬದ ಆರು ಮಂದಿ ಕಾರಿನಲ್ಲೇ ಸಜೀವ ದಹನಗೊಂಡಿರುವ ಘೋರ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ವ್ಯಾಪ್ತಿಯಲ್ಲಿ ನಡೆದಿದೆ. ​ಬೆಂಗಳೂರಿನಿಂದ ಕಲಬುರಗಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್ ಹಾಗೂ ತಿಂಥಣಿ ಮೌನೇಶ್ವರ ವೇಣುಗೋಪಾಲ ಸ್ವಾಮಿಯ ದರ್ಶನ ಮುಗಿಸಿ ಸಿರವಾರಕ್ಕೆ ಹಿಂತಿರುಗುತ್ತಿದ್ದ ಕಾರಿನ ನಡುವೆ…

Read More

ಯೋಗೀಶಗೌಡ ಹತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ; ಏಪ್ರಿಲ್ 16ಕ್ಕೆ ಶಿಕ್ಷೆ ಪ್ರಕಟ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಮಂದಿಯನ್ನು ನ್ಯಾಯಾಲಯವು ದೋಷಿಗಳೆಂದು ಘೋಷಿಸಿದೆ. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಬುಧವಾರ ಸಂಜೆ ಈ ತೀರ್ಪು ಪ್ರಕಟಿಸಿದ್ದು, ದೋಷಿಗಳನ್ನು ತಕ್ಷಣವೇ ವಶಕ್ಕೆ…

Read More

​ಯೋಗೀಶಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ; ನಾಳೆ ಶಿಕ್ಷೆ ಪ್ರಕಟ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಮಂದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಪರಾಧಿಗಳೆಂದು ಘೋಷಿಸಿದೆ. ​ನ್ಯಾಯಾಲಯದ ತೀರ್ಪು ​ಶಾಸಕರು ಹಾಗೂ ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಬುಧವಾರ ಸಂಜೆ ಈ ಐತಿಹಾಸಿಕ ತೀರ್ಪು ಪ್ರಕಟಿಸಿದರು. ಪ್ರಕರಣದಲ್ಲಿ…

Read More

ನಿರೀಕ್ಷಿತ ಅಂಕ ಬರಲಿಲ್ಲವೆಂದು ಮನನೊಂದು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಹುಬ್ಬಳ್ಳಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾನು ನಿರೀಕ್ಷಿಸಿದಷ್ಟು ಅಂಕಗಳು ಬರಲಿಲ್ಲ ಎಂಬ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಗರದ ಉಣಕಲ್‌ನ ಸಿದ್ಧಕಲ್ಯಾಣ ನಗರದಲ್ಲಿ ನಡೆದಿದೆ. ​ಹುಬ್ಬಳ್ಳಿಯ ವಿದ್ಯಾನಗರದ ಕನಕದಾಸ ಕಾಲೇಜಿನ ವಿದ್ಯಾರ್ಥಿನಿ ಶ್ರಾವಣಿ ಮಾರುತಿ ಕಾಳೆ (18) ಮೃತಪಟ್ಟ ದುರ್ದೈವಿ. ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಶ್ರಾವಣಿ, ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಶೇ. 71 ರಷ್ಟು ಅಂಕಗಳನ್ನು ಪಡೆದಿದ್ದಳು. ಆದರೆ, ಪರೀಕ್ಷೆಯಲ್ಲಿ ನೂರಕ್ಕೆ ನೂರು ಪ್ರತಿಶತ ಅಂಕಗಳನ್ನು ಪಡೆಯಲೇಬೇಕೆಂದು…

Read More

​ಧಾರವಾಡದಲ್ಲಿ ಬರ್ಬರ ಹತ್ಯೆ: ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಮನೆಗೆ ನುಗ್ಗಿ ಚಾಕು ಇರಿತ

ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಭೀಕರ ರಕ್ತಪಾತ ನಡೆದಿದ್ದು, ಸಕ್ರಿಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದ ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅತಿ ಅಮಾನುಷವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ಜಿಲ್ಲೆಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದು, ಸಾರ್ವಜನಿಕ ವಲಯದಲ್ಲಿ ಭೀತಿ ಆವರಿಸಿದೆ. ​ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆಯು ಫೈರೋಜ್ ಪಠಾಣ್ ಅವರ ನಿವಾಸದಲ್ಲೇ ನಡೆದಿದೆ. ರಾತ್ರಿ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಫೈರೋಜ್ ಅವರ ಮೇಲೆ ಏಕಾಏಕಿ ಚಾಕು ಹಾಗೂ ಮಾರಕಾಸ್ತ್ರಗಳಿಂದ ದಾಳಿ…

Read More

ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರ ದುರ್ಮರಣ

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಸಿದ್ಧ ಹುಲಿಕಲ್ ಘಾಟ್ ರಸ್ತೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ಭೂಕುಸಿತಕ್ಕೆ ಮೂವರು ಕಾರ್ಮಿಕರು ಬಲಿಯಾಗಿದ್ದಾರೆ. ತಡೆಗೋಡೆ ನಿರ್ಮಾಣ ಕಾಮಗಾರಿಯಲ್ಲಿ ನಿರತರಾಗಿದ್ದ ವೇಳೆ ದಿಢೀರನೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಈ ಪ್ರಮುಖ ಹಾದಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ​ಘಟನೆಯ ವಿವರ: ವಾಹನ ಸವಾರರ ಸುರಕ್ಷತೆಗಾಗಿ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಬದಿಯ ತಡೆಗೋಡೆ (Retaining Wall) ನಿರ್ಮಾಣದ ಕೆಲಸ ನಡೆಯುತ್ತಿತ್ತು. ಗುತ್ತಿಗೆದಾರ…

Read More

​ಸಾಲ ಕೇಳಿದ್ದಕ್ಕೆ ಶಿಕ್ಷಕಿಯ ಭೀಕರ ಕೊಲೆ: 24 ಗಂಟೆಯೊಳಗೆ ಕೊಲೆಗಡುಕ ಅರೆಸ್ಟ್!

ಕಲಬುರ್ಗಿ: ಸಾಲವಾಗಿ ನೀಡಿದ್ದ ಹಣವನ್ನು ವಾಪಸ್ ಕೇಳಿದ್ದಕ್ಕೆ ಶಾಲಾ ಶಿಕ್ಷಕಿಯೊಬ್ಬರನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿ, ಸಾಕ್ಷಿ ನಾಶಕ್ಕಾಗಿ ಶವವನ್ನು ಸುಟ್ಟು ಹಾಕಿದ್ದ ಭೀಕರ ಘಟನೆಗೆ ಸಂಬಂಧಿಸಿದಂತೆ ಕಮಲಾಪುರ ಪೊಲೀಸರು ಕೇವಲ 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಂಚೋಳಿ ತಾಲೂಕಿನ ಭುಂಯರ್ ಗ್ರಾಮದ ನಿವಾಸಿ ಅಮರ್ ಕುಡ್ಡಳ್ಳಿ ಬಂಧಿತ ಆರೋಪಿಯಾಗಿದ್ದು, ಜ್ಯೋತಿ ಕಪಾಳೆ ಎಂಬುವವರೇ ಕೊಲೆಯಾದ ದುರ್ದೈವಿ ಶಿಕ್ಷಕಿ. ​ಪೊಲೀಸ್ ಮೂಲಗಳ ಪ್ರಕಾರ, ಅಮರ್ ಮತ್ತು ಜ್ಯೋತಿ ಮೊದಲಿನಿಂದಲೂ ಪರಿಚಿತರಾಗಿದ್ದು ಸ್ನೇಹಿತರಾಗಿದ್ದರು. ಈ ಸ್ನೇಹದ ಹಿನ್ನೆಲೆಯಲ್ಲಿ…

Read More