ಭೀಕರ ಅಪಘಾತಕ್ಕೆ ಇನ್ಸ್ಪೆಕ್ಟರ್ ಬಲಿ: ಅಣ್ಣಿಗೇರಿ ಬಳಿ ನಡೆದ ದುರಂತದಲ್ಲಿ ಪಂಚಾಕ್ಷರಿ ಹಿರೇಮಠ ಸ್ಥಳದಲ್ಲೇ ಸಾವು
ಹುಬ್ಬಳ್ಳಿ: (ಡಿ. 5) ಧಾರವಾಡ ಜಿಲ್ಲೆಯ ಅಣ್ಣಿಗೇರಿ ಸಮೀಪ ಕೆಲ ಘಂಟೆಗಳ ಹಿಂದೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ತೀವ್ರ ಆಘಾತ ಮೂಡಿಸಿದೆ. ಮೃತರನ್ನು ಇನ್ಸ್ಪೆಕ್ಟರ್ ಪಂಚಾಕ್ಷರಿ ಹಿರೇಮಠ ಎಂದು ಗುರುತಿಸಲಾಗಿದೆ. ಮದುವೆ ಮುಗಿಸಿಕೊಂಡು ಹಿಂದಿರುಗಿ ಬರುತ್ತಿರುವಾಗ ಈ ಘಟನೆ ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತದ ತೀವ್ರತೆಗೆ ಇನ್ಸ್ಪೆಕ್ಟರ್ ಪಂಚಾಕ್ಷರಿ ಹಿರೇಮಠ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಸೇವೆ ಸಲ್ಲಿಸಿದ್ದ ಹಿರಿಯ ಅಧಿಕಾರಿ…

