ಕರ್ನಾಟಕದ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ!
ನವದೆಹಲಿ: ದೇಶದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಜೊತೆಜೊತೆಗೆ ಕರ್ನಾಟಕದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಇಂದು ಭಾನುವಾರ ಚಾಲನೆ ನೀಡಿದೆ. ಹಿರಿಯ ನಾಯಕರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9 ರಂದು ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಘೋಷಿಸಿದ್ದಾರೆ. ಕ್ಷೇತ್ರಗಳ ಹಿನ್ನೆಲೆ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ…

