ನವಲಗುಂದ ತಾ ಪಂ ನಲ್ಲಿ ಧಾರವಾಡ ಜಿ ಪಂ ಸಿಇಒ ಭುವನೇಶ್ವರ ಪಾಟೀಲ ಅವರಿಂದ ವಿವಿಧ ಯೋಜನೆಗಳ ಪ್ರಗತಿ ಪರಿಶಿಲನಾ ಸಭೆ

Spread the love

ನವಲಗುಂದ ತಾಲೂಕು ಪಂಚಾಯತ್‌ನಲ್ಲಿ ಧಾರವಾಡ ಸಿ ಇ ಒ ಭುವನೇಶ್ವರ ಪಾಟೀಲ ಅವರಿಂದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ

ಧಾರವಾಡ: ನವಲಗುಂದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಪಾಟೀಲ್ ಭುವನೇಶ ದೇವಿದಾಸ ಅವರ ಅಧ್ಯಕ್ಷತೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ತಾ ಪಂ ಸಭಾಭವನದಲ್ಲಿ ಶುಕ್ರವಾರದಂದು ನಡೆಯಿತು.

  ಸಭೆಯಲ್ಲಿ CEO ಪಾಟೀಲ್ ಭುವನೇಶ ದೇವಿದಾಸ ಅವರು, ಪ್ರಗತಿಯಲ್ಲಿರುವ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ವಿಳಂಬವಾಗುತ್ತಿರುವ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಅಲ್ಲದೆ, ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳುವಂತೆ ತಾಕೀತು ಮಾಡಿದರು. ಭವಿಷ್ಯದ ಕಾರ್ಯಯೋಜನೆಗಳು ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

  ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ.), ತಾಲೂಕು ಯೋಜನಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು, ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಪಿ.ಆರ್.ಇ.ಡಿ. ಇಲಾಖೆ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ರೇಷ್ಮೆ ಇಲಾಖೆ, ಪಶು ಸಂಗೋಪನೆ ಇಲಾಖೆ, ಹೆಸ್ಕಾಂ, ಸಾಮಾಜಿಕ ಅರಣ್ಯ ಇಲಾಖೆ ಮತ್ತು ಆರೋಗ್ಯ ಇಲಾಖೆಗಳ ಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *