ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಇಳಿಕೆ: ₹51.50 ಕಡಿತ

Spread the love

ಬೆಂಗಳೂರು: ತೈಲ ಮಾರುಕಟ್ಟೆ ಕಂಪನಿಗಳು ಸೆಪ್ಟೆಂಬರ್ 1, 2025ರಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಇಳಿಕೆ ಮಾಡಿವೆ. 19 ಕೆಜಿ ವಾಣಿಜ್ಯ ಸಿಲಿಂಡರ್ ದರದಲ್ಲಿ 51.50 ರೂ. ಕಡಿತಗೊಳಿಸಲಾಗಿದೆ.

ಈ ಪರಿಷ್ಕೃತ ದರವು ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳಿಗೆ ಅನುಕೂಲವಾಗಲಿದೆ. ಬೆಲೆ ಇಳಿಕೆಯ ನಂತರ ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್‌ನ ದರವು 1,653 ರೂ. ಆಗಿದ್ದರೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1,580 ರೂ. ಆಗಿದೆ.

ಆದರೆ, ಬಹುತೇಕ ಜನರು ನಿರೀಕ್ಷಿಸಿದ್ದಂತೆ ಗೃಹಬಳಕೆ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಈ ನಿರ್ಧಾರವು ಗೃಹಬಳಕೆದಾರರಿಗೆ ನಿರಾಸೆ ಮೂಡಿಸಿದೆ.

Leave a Reply

Your email address will not be published. Required fields are marked *