



ಚಿಕ್ಕಮಗಳೂರು: 12 ದನಗಳಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನ, 5 ಸಾವು, 7ಕ್ಕೆ ಗಾಯ
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಅಬಿಗೇರಿ-ಹೆಬರಿಗೆ ರಸ್ತೆಯಲ್ಲಿ ನಡೆದ ಭೀಕರ ಅಪಘಾತವೊಂದರಲ್ಲಿ ಐದು ದನಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಏಳು ದನಗಳು ಗಂಭೀರವಾಗಿ ಗಾಯಗೊಂಡಿವೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿದ್ದ 12 ದನಗಳಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ.
ಅಪಘಾತದ ತೀವ್ರತೆಗೆ ಐದು ದನಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಉಳಿದ ಏಳು ದನಗಳು ಗಂಭೀರವಾಗಿ ಗಾಯಗೊಂಡಿವೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಗಾಯಗೊಂಡ ದನಗಳಿಗೆ ಚಿಕಿತ್ಸೆ ನೀಡಲು ಸ್ಥಳೀಯ ಪಶು ವೈದ್ಯರ ತಂಡವು ನೆರವಾಗಿದೆ.
ಈ ಘಟನೆಯಿಂದ ಸ್ಥಳೀಯರಲ್ಲಿ ತೀವ್ರ ಆತಂಕ ಉಂಟಾಗಿದೆ. ಅಪಘಾತಕ್ಕೆ ಕಾರಣವಾದ ವಾಹನ ಮತ್ತು ಅದರ ಚಾಲಕನನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಆರಂಭಿಬೆಕೆಂದು ಸ್ಥಳಿಯರು ಮನವಿ ಮಾಡಿಕೊಂಡಿದ್ದಾರೆ.

