🌳 ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ: ರಾಜ್ಯಾದ್ಯಂತ ನಾಳೆ ಶನಿವಾರ ಸಾರ್ವಜನಿಕ ರಜೆ ಘೋಷಣೆ

Spread the love

ಬೆಂಗಳೂರು:ನಾಡಿನ ಹೆಮ್ಮೆಯ ಪರಿಸರವಾದಿ ಹಾಗೂ ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಶುಕ್ರವಾರ (14.11.2025) ಬೆಳಗಿನ ಜಾವ 02:30ಕ್ಕೆ ನಿಧನರಾದ ಕುರಿತು ಕರ್ನಾಟಕ ಸರ್ಕಾರವು ಗಂಭೀರ ಸಂತಾಪ ಸೂಚಿಸಿದೆ. ಈ ಬಗ್ಗೆ ಸಚಿವಾಲಯ, ವಿಧಾನ ಸೌಧದಿಂದ ಸಂಖ್ಯೆ: ಸಿಆಸುಇ 35 ಹಚ್‌ಹಚ್ಚಲ್ 2024ರ ಅಧಿಸೂಚನೆ ಹೊರಡಿಸಲಾಗಿದೆ.

ಪರಿಸರ ಸಂರಕ್ಷಣೆಯಲ್ಲಿ ಅಪಾರ ಕೊಡುಗೆ ನೀಡಿದ ದಿವಂಗತ ತಿಮ್ಮಕ್ಕ ಅವರ ಗೌರವಾರ್ಥವಾಗಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಪ್ರಕಟಿಸಿದೆ. ಅವರ ಅಂತ್ಯಕ್ರಿಯೆಯನ್ನು ಶನಿವಾರ ರಂದು, ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದೇ ಸಂದರ್ಭದಲ್ಲಿ ದಿವಂಗತರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ, 15.11.2025 ಶನಿವಾರ ರಾಜ್ಯಾದ್ಯಂತ ಸಾರ್ವಜನಿಕ ರಜೆಯನ್ನು ಸರ್ಕಾರ ಘೋಷಿಸಿದೆ. ಈ ರಜೆ ಸರ್ಕಾರಿ ಕಚೇರಿಗಳು, ಎಲ್ಲಾ ಶಾಲಾ-ಕಾಲೇಜುಗಳು, ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ರಾಜ್ಯದ ಎಲ್ಲ ಶೈಕ್ಷಣಿಕ ಮತ್ತು ಸರ್ಕಾರಿ ಇಲಾಖೆಗೆ ಅನ್ವಯವಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

Leave a Reply

Your email address will not be published. Required fields are marked *