ಸಮೀಕ್ಷೆಗೆ ಗೌರವಧನ ಪಾವತಿಗೆ ಆಗ್ರಹ: ಆಶಾ ಕಾರ್ಯಕರ್ತೆಯರಿಂದ ಬಹಿಷ್ಕಾರದ ಎಚ್ಚರಿಕೆ

Spread the love

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಆಶಾ ಕಾರ್ಯಕರ್ತೆಯರು ಭಾಗವಹಿಸುವುದಿಲ್ಲ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಎಚ್ಚರಿಕೆ ನೀಡಿದೆ.

ಗ್ರಾಮೀಣ ಭಾಗದ ಆಶಾ ಕಾರ್ಯಕರ್ತೆಯರಿಗೆ ರೂ. 7,500 ಮತ್ತು ನಗರ ಪ್ರದೇಶದ ಆಶಾ ಕಾರ್ಯಕರ್ತೆಯರಿಗೆ ರೂ. 10,000 ಗೌರವಧನ ನಿಗದಿಪಡಿಸಿ ಆದೇಶಿಸಬೇಕು, ಇಲ್ಲವಾದರೆ ಸಮೀಕ್ಷಾ ಕಾರ್ಯದಿಂದ ನಮ್ಮನ್ನು ಕೈಬಿಡಬೇಕು ಎಂದು ಸಂಘದ ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಮತ್ತು ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ ಸರ್ಕಾರವು ಈ ಹಿಂದೆ ಗ್ಯಾರಂಟಿ ಯೋಜನೆಗಳ ಸಮೀಕ್ಷೆ ನಡೆಸಿದಾಗ ನಿಗದಿಪಡಿಸಿದ್ದ ರೂ. 1,000 ಗೌರವಧನವನ್ನು ಇದುವರೆಗೂ ಪಾವತಿಸಿಲ್ಲ. ಅದೇ ರೀತಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಕೆಲಸ ಮಾಡಿದ ಆಶಾ ಕಾರ್ಯಕರ್ತೆಯರಿಗೆ ನಿಗದಿಯಾಗಿದ್ದ ರೂ. 10,000 ಗೌರವಧನವನ್ನೂ ಪಾವತಿಸಿಲ್ಲ. ಈ ಬಾಕಿ ಉಳಿದಿರುವ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಬೇಡಿಕೆಗಳನ್ನು ಈಡೇರಿಸದಿದ್ದರೆ, ನಾವು ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸುವುದಿಲ್ಲ ಎಂದು ಸಂಘವು ಸ್ಪಷ್ಟಪಡಿಸಿದೆ.

Leave a Reply

Your email address will not be published. Required fields are marked *