​ನಾಳೆ ಕುಂದಗೋಳಕ್ಕೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಭೇಟಿ: ಸಾರ್ವಜನಿಕ ಅಹವಾಲು ಸ್ವೀಕಾರ

Spread the love

ಕುಂದಗೋಳ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಧಾರವಾಡ ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್. ಅವರು ನಾಳೆ ಕುಂದಗೋಳ ತಾಲೂಕಿಗೆ ಭೇಟಿ ನೀಡಲಿದ್ದಾರೆ. ದಿನಾಂಕ 19.02.2026ರ ಗುರುವಾರದಂದು ಬೆಳಿಗ್ಗೆ 10.30ಕ್ಕೆ ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಿದ್ದಾರೆ.

​ತಾಲೂಕಿನ ವಿವಿಧ ಗ್ರಾಮಗಳ ಸಾರ್ವಜನಿಕರು ತಮ್ಮ ಕುಂದುಕೊರತೆಗಳು, ಭೂ ದಾಖಲೆಗಳ ಸಮಸ್ಯೆ, ಪಡಿತರ ಚೀಟಿ, ಪಿಂಚಣಿ ಸೌಲಭ್ಯ ಸೇರಿದಂತೆ ಇಲಾಖಾವಾರು ದೂರುಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ನೇರವಾಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತಾಲೂಕು ಆಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿರಲಿದ್ದು, ಸ್ಥಳದಲ್ಲೇ ಅಹವಾಲುಗಳ ವಿಲೇವಾರಿಗೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *