
ಧಾರವಾಡ: ನಗರದ ಜಯ ಕರ್ನಾಟಕ ಜನಪರ ವೇದಿಕೆಯ ವತಿಯಿಂದ ಶನಿವಾರದಂದು 538ನೇ ಶ್ರೀ ಕನಕದಾಸರ ಜಯಂತ್ಯುತ್ಸವವನ್ನು ಸಡಗರದಿಂದ ಆಚರಿಸಲಾಯಿತು.
ಧಾರವಾಡದ ಶ್ರೀನಗರ ವೃತ್ತದಲ್ಲಿ ಆಯೋಜಿಸಲಾಗಿದ್ದ ಈ ವಿಶೇಷ ಕಾರ್ಯಕ್ರಮದಲ್ಲಿ, ಶ್ರೇಷ್ಠ ಭಕ್ತ ಕವಿ ಶ್ರೀ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ರಾಜ್ಯ ಉಪಾಧ್ಯಕ್ಷರ ನೇತೃತ್ವದಲ್ಲಿ ಈ ಆಚರಣೆ ನಡೆಯಿತು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು ಬೆಳ್ಳಕ್ಕಿ ಅವರು ಉಪಸ್ಥಿತರಿದ್ದರು. ಜೊತೆಗೆ, ಪದಾಧಿಕಾರಿಗಳಾದ ಜಗದೀಶ ಜಾಧವ, ಗುರುಡ್ಡಪ್ಪ ಅವ್ವನ್ನವರ, ಪ್ರಮೋದ ಶೆಟ್ಟಿ, ಮಹೇಶ ಹೊಸೂರ, ರವೀಂದ್ರ ಮಾನೆ ಸೇರಿದಂತೆ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

