
ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯ ಎರಡನೇ ಸುತ್ತು ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎರಡನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ 6,154 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಲಿಂಬಿಕಾಯಿ 4,663 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಎರಡನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ 1,491 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಮೊದಲ ಮತ್ತು ಎರಡನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಎರಡೂ ಸುತ್ತುಗಳಲ್ಲಿ ಒಟ್ಟಾರೆ ಬಿಜೆಪಿ ಅಭ್ಯರ್ಥಿ 3,556 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮುಂದಿನ ಸುತ್ತುಗಳ ಮತ ಎಣಿಕೆಯತ್ತ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ಕಾರ್ಯಕರ್ತರ ಗಮನ ನೆಟ್ಟಿದೆ.

