
ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಮೂರನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮೂರನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ 6,301 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ 4,748 ಮತಗಳನ್ನು ಪಡೆದಿದ್ದಾರೆ. ಈ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ 1,553 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಮೂರು ಸುತ್ತುಗಳ ಮತ ಎಣಿಕೆ ಪೂರ್ಣಗೊಂಡಿದ್ದು, ಒಟ್ಟು 5,103 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮುಂದಿನ ಸುತ್ತುಗಳ ಮತ ಎಣಿಕೆಯತ್ತ ಅಭ್ಯರ್ಥಿಗಳು ಹಾಗೂ ಬೆಂಬಲಿಗರ ಗಮನ ನೆಟ್ಟಿದೆ.

