ಧಾರವಾಡ ಜಿಲ್ಲೆಯಲ್ಲಿ ಮಳೆ ಅಬ್ಬರ: 20 ಮನೆಗಳಿಗೆ ಹಾನಿ, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ

Spread the love

ಧಾರವಾಡ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಒಟ್ಟು 20 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಮಳೆಯಿಂದಾಗಿ ಧಾರವಾಡ ನಗರದಲ್ಲಿ 1, ಹುಬ್ಬಳ್ಳಿಯಲ್ಲಿ 16 ಮತ್ತು ಕುಂದಗೋಳದಲ್ಲಿ 3 ಮನೆಗಳಿಗೆ ಹಾನಿಯಾಗಿದೆ. ಈ ಘಟನೆಯಲ್ಲಿ ಯಾವುದೇ ಮಾನವ ಅಥವಾ ಜಾನುವಾರುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಪ್ರಾಥಮಿಕ ಸಮೀಕ್ಷೆಯಿಂದ ತಿಳಿದುಬಂದಿದೆ.

ಬೆಳೆ ಹಾನಿಯ ಕುರಿತಂತೆ ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸುತ್ತಿದ್ದು, ವರದಿ ಸಿದ್ಧಪಡಿಸುತ್ತಿದ್ದಾರೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಸಿದ್ಧತೆ ನಡೆಸುತ್ತಿದೆ.

Leave a Reply

Your email address will not be published. Required fields are marked *