ಧಾರವಾಡ: ನಗರದ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ವತಿಯಿಂದ 2025-26ನೇ ಸಾಲಿನ ವಿವಿಧ ಯೋಜನೆಗಳಡಿ ಆಯೋಜಿಸಲಾಗುವ ರೈತರ ಮತ್ತು ಅಧಿಕಾರಿಗಳ ತರಬೇತಿ ಕಾರ್ಯಕ್ರಮಗಳಿಗೆ ಊಟ ಹಾಗೂ ಉಪಹಾರವನ್ನು ಪೂರೈಸಲು ಅರ್ಹ ಕೆಟರಿಂಗ್ ಮಾಲೀಕರಿಂದ ಮುಚ್ಚಿದ ಲಕೋಟೆಯಲ್ಲಿ ದರಪಟ್ಟಿಗಳನ್ನು ಆಹ್ವಾನಿಸಲಾಗಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಹಾಯಕ ಕೃಷಿ ನಿರ್ದೇಶಕರು, ತರಬೇತಿ ಕೇಂದ್ರದಲ್ಲಿ ನಡೆಯುವ ವರ್ಷಪೂರ್ತಿ ಕಾರ್ಯಕ್ರಮಗಳಿಗೆ ಗುಣಮಟ್ಟದ ಆಹಾರ ಸರಬರಾಜು ಮಾಡುವ ಆಸಕ್ತಿಯುಳ್ಳ ಕೆಟರಿಂಗ್ ಸಂಸ್ಥೆಗಳು ತಮ್ಮ ದರಪಟ್ಟಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತರು ನಿಗದಿತ ನಮೂನೆಯಲ್ಲಿ ದರಪಟ್ಟಿಗಳನ್ನು ಸಿದ್ಧಪಡಿಸಿ, ಡಿಸೆಂಬರ್ 30, 2025ರ ಸಂಜೆ ಒಳಗಾಗಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕಚೇರಿಗೆ ತಲುಪಿಸಬೇಕು ಎಂದು ತಿಳಿಸಿದ್ದಾರೆ. ವಿಳಂಬವಾಗಿ ಬಂದ ದರಪಟ್ಟಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

