ಧಾರವಾಡ: ಜಿಲ್ಲಾ ನ್ಯಾಯಾಲಯದ ಆವರಣ ಹಾಗೂ ವಿವಿಧ ತಾಲ್ಲೂಕು ನ್ಯಾಯಾಲಯಗಳ ಸಂಕೀರ್ಣಗಳ ಸ್ವಚ್ಛತಾ ಕಾರ್ಯವನ್ನು ನಿರ್ವಹಿಸಲು ಮಾನವ ಸಂಪನ್ಮೂಲ ಒದಗಿಸುವ ಏಜೆನ್ಸಿಗಳಿಂದ ಇ-ಟೆಂಡರ್ ಆಹ್ವಾನಿಸಲಾಗಿದೆ. ಧಾರವಾಡ ಜಿಲ್ಲಾ ಕೇಂದ್ರದ ನ್ಯಾಯಾಲಯ ಸೇರಿದಂತೆ ಕುಂದಗೋಳ, ನವಲಗುಂದ ಹಾಗೂ ಕಲಘಟಗಿ ನ್ಯಾಯಾಲಯ ಸಂಕೀರ್ಣಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲು ಅರ್ಹ ಮತ್ತು ಅನುಭವಿ ಏಜೆನ್ಸಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಟೆಂಡರ್ ಪ್ರಕ್ರಿಯೆಯು ಇ-ಪ್ರೊಕ್ಯೂರ್ಮೆಂಟ್ ಮೂಲಕ ನಡೆಯಲಿದ್ದು, ಟೆಂಡರ್ ಸಂಖ್ಯೆ (HCK/2025/SE0126) ಅಡಿಯಲ್ಲಿ ಆಸಕ್ತ ಸಂಸ್ಥೆಗಳು ತಮ್ಮ ಪ್ರಸ್ತಾವನೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇ-ಟೆಂಡರ್ ಸಲ್ಲಿಸಲು ಡಿಸೆಂಬರ್ 29, 2025 ರ ಸಂಜೆ 5 ಗಂಟೆಯವರೆಗೆ ಅಂತಿಮ ಕಾಲಾವಕಾಶ ನೀಡಲಾಗಿದೆ. ಈ ಕುರಿತಾದ ಹೆಚ್ಚಿನ ತಾಂತ್ರಿಕ ಮಾಹಿತಿ, ನಿಯಮಗಳು ಮತ್ತು ನಿಬಂಧನೆಗಳಿಗಾಗಿ ಆಸಕ್ತರು ಧಾರವಾಡ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಆದ http://dharwad.dcourts.gov.in/notice-category/tenders/ ಗೆ ಭೇಟಿ ನೀಡಬಹುದು ಎಂದು ಜಿಲ್ಲಾ ನ್ಯಾಯಾಲಯದ ಪ್ರಭಾರ ಮುಖ್ಯ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

