
ಹುಬ್ಬಳ್ಳಿ: ನಿರಂತರ ಮಳೆಯಿಂದಾಗಿ ಹಾನಿಗೊಳಗಾದ ಬೆಳೆ ಪ್ರದೇಶಗಳನ್ನು ಪರಿಶೀಲಿಸಲು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರು ಇಂದು ಮಧ್ಯಾಹ್ನ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1 ರಿಂದ 2:30 ರವರೆಗೆ ಈ ಭೇಟಿ ನಡೆಯಲಿದ್ದು, ಈ ವೇಳೆ ಜಿಲ್ಲಾಧಿಕಾರಿಗಳು ಸಹ ಉಪಸ್ಥಿತರಿರುತ್ತಾರೆ.
ಸಚಿವರು ಅಣ್ಣಿಗೇರಿ ತಾಲೂಕಿನ ಮಣಕವಾಡ, ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಮತ್ತು ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮಗಳಲ್ಲಿನ ಬೆಳೆ ಹಾನಿಯನ್ನು ಪರಿಶೀಲಿಸಲಿದ್ದಾರೆ. ಈ ಭಾಗಗಳಲ್ಲಿ ಹೆಸರು, ಉದ್ದು, ಈರುಳ್ಳಿ ಮತ್ತು ಇತರ ಬೆಳೆಗಳು ಹಾನಿಗೊಳಗಾಗಿದ್ದು, ಸ್ಥಳೀಯ ರೈತರ ಸಮಸ್ಯೆಗಳನ್ನು ಆಲಿಸಲು ಮತ್ತು ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಈ ಭೇಟಿ ನಡೆಸಲಾಗುತ್ತಿದೆ.
ಈ ಭೇಟಿಯಲ್ಲಿ ನವಲಗುಂದ ಮತ್ತು ಕುಂದಗೋಳದ ಶಾಸಕರು ಮಾಜಿ ಶಾಸಕರು ಹಾಗೂ ಮುಂಖಡರುಗಳು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

