
ಧಾರವಾಡ: ಇತ್ತೀಚೆಗೆ ನಿಧನರಾದ ಹಿರಿಯ ಸಂಗೀತಗಾರ ಹಾಗೂ ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನ ಸದಸ್ಯ ಡಾ. ಅಶೋಕ ಹುಗ್ಗನ್ನವರ ಅವರಿಗೆ ಗೌರವ ಸಲ್ಲಿಸಲು ಜನೆವರಿ 06ರಂದು ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಂಗಳವಾರ ಸಂಜೆ 4 ಗಂಟೆಗೆ ನಗರದ ರಂಗಾಯಣ ಆವರಣದಲ್ಲಿರುವ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ವಿವರ:
- ದಿನಾಂಕ: ಜನೆವರಿ 06, 2026 (ಮಂಗಳವಾರ)
- ಸಮಯ: ಸಂಜೆ 4:00 ಗಂಟೆಗೆ
- ಸ್ಥಳ: ಸುವರ್ಣ ಸಾಂಸ್ಕೃತಿಕ ಸಮುಚ್ಚಯ, ರಂಗಾಯಣ ಆವರಣ, ಧಾರವಾಡ.
ಗಣ್ಯರ ಉಪಸ್ಥಿತಿ:
ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿರಲಿದ್ದಾರೆ. ಡಿಸೆಂಬರ್ 25, 2025ರಂದು ಅಕಾಲಿಕ ನಿಧನರಾದ ಡಾ. ಅಶೋಕ ಹುಗ್ಗನ್ನವರ ಅವರ ಸ್ಮರಣಾರ್ಥ ನಡೆಯುವ ಈ ಕಾರ್ಯಕ್ರಮಕ್ಕೆ ನಾಡಿನ ಸಂಗೀತ ಕಲಾವಿದರು, ಸಾಹಿತ್ಯಾಸಕ್ತರು ಹಾಗೂ ಅವರ ಅಪಾರ ಶಿಷ್ಯವೃಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಮನ ಸಲ್ಲಿಸಬೇಕೆಂದು ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

