
ಧಾರವಾಡ: ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಅ.6ರಂದು ಒಟ್ಟು 21 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರೊಂದಿಗೆ ಈವರೆಗೆ 18 ಅಭ್ಯರ್ಥಿಗಳಿಂದ ಒಟ್ಟು 36 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಹಾಗೂ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣಾಧಿಕಾರಿ ಕೆ.ಎಂ. ಜಾನಕಿ ತಿಳಿಸಿದ್ದಾರೆ.
ಅ.6ರಂದು ಬಸವರಾಜ ಕೊಟಗಿ, ಜೀಶಾನ ಅಹ್ಮದಖಾನ ಪಠಾಣ, ಕಾಂತಕುಮಾರ್, ಸಂತೋಷ ವೆರ್ಣೇಕರ, ಉಮೇಶ ದೈವಜ್ಞ, ಕೃಷ್ಣ, ಜಿಶಾನ ಸಿರಸಂಗಿ, ಅಬ್ದುಲ್ ಮುನ್ನನ, ಇಮ್ರಾನ್ ಕೂಡಲ, ಆರ್.ಎಂ. ಕುಬೇರಪ್ಪ ಹಾಗೂ ಸಲೀಮ ಜವಳಿ ಅವರು ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.
ನಿಶಾಂತ ಬಂಕಾಪೂರ ಅವರು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ, ಶಿವಕುಮಾರ ತಳವಾರ ಅವರು ಜನತಾ ಚಳುವಳಿ ಭಾರತ ಪಕ್ಷದಿಂದ, ಸಿದ್ದಲಿಂಗಪ್ಪ ಸಂಕನೂರ ಅವರು ಭಾರತೀಯ ಜನತಾ ಪಕ್ಷದಿಂದ ಹಾಗೂ ಮಲ್ಲಿಕಾರ್ಜುನ ಚನ್ನಪ್ಪ ಗಂಗಾಧರ ಅವರು ಕಿತ್ತೂರ ಕಲ್ಯಾಣ ಕರ್ನಾಟಕ ಸೇನಾ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಇದೇ ವೇಳೆ, ಅ.6ರಂದು ಒಟ್ಟು 21 ನಾಮಪತ್ರಗಳು ಸ್ವೀಕೃತಗೊಂಡಿದ್ದು, ಈವರೆಗೆ 18 ಅಭ್ಯರ್ಥಿಗಳಿಂದ 36 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಕೆ.ಎಂ. ಜಾನಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

