ಡಿಸೆಂಬರ್ 13 ರಿಂದ ಹುಬ್ಬಳ್ಳಿಯಲ್ಲಿ ಜಿಲ್ಲಾ ಮಟ್ಟದ ಫಲ-ಪುಷ್ಪ ಪ್ರದರ್ಶನ ಮತ್ತು ಸಿರಿಧಾನ್ಯ ಹಬ್ಬ

Spread the love

ಧಾರವಾಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಫಲ-ಪುಷ್ಪ ಪ್ರದರ್ಶನ ಸಮಿತಿ, ಜಿಲ್ಲಾ ಹಾಪ್‌ಕಾಮ್ಸ್, ಮೀನುಗಾರಿಕೆ ಇಲಾಖೆ ಮತ್ತು ಎನ್‌ಆರ್‌ಎಲ್‌ಎಮ್ (ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ) ಸಹಯೋಗದೊಂದಿಗೆ 2025-26ನೇ ಸಾಲಿನ ಜಿಲ್ಲಾ ಮಟ್ಟದ ಫಲ-ಪುಷ್ಪ ಪ್ರದರ್ಶನವನ್ನು ಹಾಗೂ ಸಿರಿಧಾನ್ಯ ಹಬ್ಬವನ್ನು ಆಯೋಜಿಸಲಾಗಿದೆ.

​ಈ ಬೃಹತ್ ಕಾರ್ಯಕ್ರಮವು ಡಿಸೆಂಬರ್ 13, 2025 ರಿಂದ ಡಿಸೆಂಬರ್ 15, 2025 ರವರೆಗೆ ಮೂರು ದಿನಗಳ ಕಾಲ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆ ಆವರಣದಲ್ಲಿ ನಡೆಯಲಿದೆ.

​ಸದರಿ ಫಲ-ಪುಷ್ಪ ಪ್ರದರ್ಶನ ಮತ್ತು ಸಿರಿಧಾನ್ಯ ಹಬ್ಬದಲ್ಲಿ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಸಂಘ ಸಂಸ್ಥೆಗಳು, ರೈತರು ಮತ್ತು ಸಾರ್ವಜನಿಕರಿಗೆ ತೋಟಗಾರಿಕೆ ಬೆಳೆಗಳು, ವಿವಿಧ ಬಗೆಯ ಹೂಗಳು ಮತ್ತು ಅಲಂಕಾರಿಕ ಗಿಡಗಳ ಪ್ರದರ್ಶನದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

​ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0836-2957801 ಗೆ ಸಂಪರ್ಕಿಸಬಹುದು. ಅಥವಾ ಧಾರವಾಡದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ) ಅಥವಾ ಹುಬ್ಬಳ್ಳಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು (ಜಿಲ್ಲಾ ಪಂಚಾಯತ್) ಸಂಪರ್ಕಿಸಬಹುದೆಂದು ತೋಟಗಾರಿಕೆ ಜಂಟಿ ನಿರ್ದೇಶಕ ಕಾಶೀನಾಥ ಭದ್ರನ್ನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *