ನ. 5 ರಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ

Spread the love

ಧಾರವಾಡ ಅ.30: ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯ ವಿಧಾನಗಳು ಹಾಗೂ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಎಸ್. ಆರ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 5, 2025 ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಪ್ರಗತಿ ಪರಿಶೀಲನಾ ಸಭೆಗೆ ತಮ್ಮ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ಹಾಜರಾಗಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *