
ಧಾರವಾಡ: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯ ನಿಮಿತ್ತ ಶನಿವಾರದಂದು ನಗರದ ಆಲೂರು ವೆಂಕಟರಾವ್ (ಜುಬ್ಲಿ) ವೃತ್ತದ ಹತ್ತಿರವಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾ ಮಟ್ಟದ ಗಣ್ಯರು ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸೇರಿದಂತೆ ಹಲವು ಗಣ್ಯರು ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ನಂತರ, ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾರ್ಚಣೆ ಮಾಡಿ ಗೌರವ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಡಾ. ಡಿ.ಎಚ್. ಹೂಗಾರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ. ಶುಭ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಸಮಾಜದ ಮುಖಂಡರಾದ ಎಂ. ಅರವಿಂದ, ಲಕ್ಷ್ಮಣ ಬಕ್ಕಾಯಿ ಸೇರಿದಂತೆ ವಿವಿಧ ಪ್ರಮುಖರು ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

