ಭಾನುವಾರ, 22 Nov 2026 | ಕನ್ನಡ & ರಾಷ್ಟ್ರೀಯ ಸುದ್ದಿ ಪೋರ್ಟಲ್
Karnataka

ಜ್ಞಾನದ ಜೊತೆಗೆ ಕೌಶಲ್ಯ, ಕೌಶಲ್ಯದೊಂದಿಗೆ ಮೌಲ್ಯಗಳನ್ನು ಬೆಳೆಸಿಕೊಳ್ಳಿ: ಪ್ರೊ. ಎನ್.ಕೆ. ಲೋಕನಾಥ್

30-ಸೆಕೆಂಡ್ ಮುಖ್ಯಾಂಶಗಳು (30-Sec AI Summary)
  • ಪ್ರಮುಖ ಬೆಳವಣಿಗೆ: ಜ್ಞಾನದ ಜೊತೆಗೆ ಕೌಶಲ್ಯ, ಕೌಶಲ್ಯದೊಂದಿಗೆ ಮೌಲ್ಯಗಳನ್ನು ಬೆಳೆಸಿಕೊಳ್ಳಿ: ಪ್ರೊ. ಎನ್.ಕೆ. ಲೋಕನಾಥ್
  • **ಕೊಳ್ಳೇಗಾಲ:** ಪಟ್ಟಣದ ಮಾನಸ ಶಿಕ್ಷಣ ಸಂಸ್ಥೆಯಲ್ಲಿ ಮನಸೋತ್ಸವದ ಎರಡನೇ ದಿನವಾದ ಶನಿವಾರ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಂಸ್ಥೆಯಿಂದ ನಿವೃತ್ತರಾದ ಶಿಕ್ಷಕರು ಹಾಗೂ ವರ್ಗಾವಣೆಗೊಂಡ ಶಿಕ್ಷಕರು ಮತ್ತು…
  • ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮತ್ತು ಸ್ಥಳೀಯ ಮೂಲಗಳಿಂದ ಸಮಗ್ರ ವರದಿ ಪರಿಶೀಲನೆ.
ಸುದ್ದಿ ಆಲಿಸಿ • ಸಿದ್ಧವಾಗಿದೆ (Ready)
AI ಆಡಿಯೋ ನ್ಯೂಸ್‌ರೂಮ್ • ಕನ್ನಡ & English
ವೇಗ:
Spread the love

**ಕೊಳ್ಳೇಗಾಲ:** ಪಟ್ಟಣದ ಮಾನಸ ಶಿಕ್ಷಣ ಸಂಸ್ಥೆಯಲ್ಲಿ ಮನಸೋತ್ಸವದ ಎರಡನೇ ದಿನವಾದ ಶನಿವಾರ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಂಸ್ಥೆಯಿಂದ ನಿವೃತ್ತರಾದ ಶಿಕ್ಷಕರು ಹಾಗೂ ವರ್ಗಾವಣೆಗೊಂಡ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗೌರವಪೂರ್ವಕವಾಗಿ ಗುರುವಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಮೈಸೂರು ವಿಶ್ವವಿದ್ಯಾನಿಲಯದ ಪ್ರೊ. ಎನ್.ಕೆ. ಲೋಕನಾಥ್ ಅವರು, ಶಿಕ್ಷಣವು ಬದುಕಿನಲ್ಲಿ ಅತ್ಯಂತ ಮಹತ್ವದ್ದಾಗಿದೆ. ಜೀವನದಲ್ಲಿ ಶ್ರದ್ಧೆ ಮತ್ತು ಶ್ರಮವಿದ್ದರೆ ನಮ್ಮ ಗುರಿ ಹಾಗೂ ಯಶಸ್ಸನ್ನು ಸಾಧಿಸಲು ಸಾಧ್ಯ. ಬದುಕಿನಲ್ಲಿ ಸದಾ ಹೊಸತನದ ಹುಡುಕಾಟ ಇರಬೇಕು. ಆಗ ಮಾತ್ರ ದೇಶಕ್ಕೆ ಮಹತ್ವದ ಕೊಡುಗೆ ನೀಡಲು ಸಾಧ್ಯವಾಗುತ್ತದೆ. ಜ್ಞಾನದ ಜೊತೆಗೆ ಕೌಶಲ್ಯವೂ ಮುಖ್ಯವಾಗಿದ್ದು, ಕೌಶಲ್ಯದೊಂದಿಗೆ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಕಪ್ಪಡಿ ಕ್ಷೇತ್ರದ ಶ್ರೀ ಮಂಟೇಸ್ವಾಮಿ ಮಠದ ಪೀಠಾಧಿಪತಿ ಶ್ರೀ ಎಂ.ಎಲ್. ವರ್ಚಸ್ವಿ ಶ್ರೀಕಂಠ ಸಿದ್ದಲಿಂಗ ರಾಜೇ ಅರಸ್ ಅವರು ಆಶೀರ್ವಚನ ನೀಡಿ, ನಾವೆಲ್ಲರೂ ಈಗ ಕೃತಕ ಬುದ್ಧಿಮತ್ತೆ (ಎಐ) ಯುಗದಲ್ಲಿದ್ದೇವೆ. ಈ ತಂತ್ರಜ್ಞಾನದ ಬಳಕೆಯಲ್ಲಿ ಎಚ್ಚರಿಕೆ ವಹಿಸಬೇಕು ಹಾಗೂ ಅಗತ್ಯವಿರುವಷ್ಟು ಮಾತ್ರ ಅದಕ್ಕೆ ಹೊಂದಿಕೊಳ್ಳಬೇಕು ಎಂದು ತಿಳಿಸಿದರು.

ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತ ಕೆ. ರಾಮನ್ ಮಾತನಾಡಿ, ಮಾಹಿತಿ ಹಕ್ಕು ಕಾಯಿದೆ ಅಸ್ತಿತ್ವದಲ್ಲಿದೆ ಎಂಬ ಅರಿವು ಪ್ರತಿಯೊಬ್ಬರಿಗೂ ಇರಬೇಕು. ಮುಂದಿನ 10 ವರ್ಷಗಳ ನಂತರ ರಸ್ತೆ ದುರಸ್ತಿಯಾಗುತ್ತದೆ, ಚರಂಡಿ ಸರಿಪಡಿಸಲಾಗುತ್ತದೆ ಎಂಬ ಮಾತು ಲೇವಡಿಯಲ್ಲ. ನಾವು ಎಲ್ಲಿಯವರೆಗೆ ನ್ಯಾಯಯುತವಾಗಿ ಪ್ರಶ್ನಿಸುವುದಿಲ್ಲವೋ, ಅಲ್ಲಿಯವರೆಗೆ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಪರಿಮಳ ನಾಗಪ್ಪ ಮಾತನಾಡಿ, ಮಾನಸ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಶಿಸ್ತು ಇತರರಿಗೆ ಮಾದರಿಯಾಗಿದೆ. ಈ ಸಂಸ್ಥೆಯನ್ನು ಕಟ್ಟಿ ಬೆಳೆಸುವಲ್ಲಿ ಡಾ. ದತ್ತೇಶ್ ಕುಮಾರ್ ಹಾಗೂ ನಾಗರಾಜ್ ಅವರ ಪರಿಶ್ರಮ ಅಪಾರವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾನ್ನಿಧ್ಯ ವಹಿಸಿದ್ದ ಮೈಸೂರಿನ ಅಖಿಲ ಭಾರತ ಮಿಲಿ ಕೌನ್ಸಿಲ್ ಅಧ್ಯಕ್ಷ ಮೌಲಾನಾ ಮಹಮ್ಮದ್ ಜಕ್ಕವುಲ್ಲಾ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ವಂದಿಸುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಮಾನಸ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉದಾರವಾಗಿ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದರು.

ADVERTISEMENT