ಧಾರವಾಡ: ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಶ್ರೀಮತಿ ಆರ್.ಎಫ್.ಪಾಟೀಲ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮವು ಮಾರ್ಚ್ 7 ರಂದು ಮಧ್ಯಾಹ್ನ 2 ಗಂಟೆಗೆ ಅದ್ದೂರಿಯಾಗಿ ನೆರವೇರಲಿದೆ.
ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರು ಕಟ್ಟಡದ ಭೂಮಿ ಪೂಜೆ ನೆರವೇರಿಸಲಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಗೌರವ ಉಪಸ್ಥಿತರಿರಲಿದ್ದು, ಶಾಸಕ ಎಂ.ಆರ್. ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ವಿಧಾನ ಪರಿಷತ್ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮ್ಪೀರ್ ಎಸ್.ಖಾದ್ರಿ, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ನಾಗೇಂದ್ರ ಕುಮಾರ್ ಹಾಗೂ ಜಲಮಂಡಳಿ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ಎಸ್. ವಿ. ಸಂಕನೂರ, ಪ್ರದೀಪ ಶೆಟ್ಟರ, ಎಫ್.ಹೆಚ್.ಜಕಪ್ಪನವರ ಸೇರಿದಂತೆ ವಿವಿಧ ಅಕಾಡೆಮಿಗಳ ಅಧ್ಯಕ್ಷರು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ವೇದಿಕೆಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತೆ ಎನ್. ಮಂಜುಶ್ರೀ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ್ ಸಿಇಒ ಭುವನೇಶ ಪಾಟೀಲ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿರುವರು. ಈ ಮಹತ್ವದ ಕಾರ್ಯಕ್ರಮಕ್ಕೆ ಭೂ ದಾನಿ ಹನಮಂತಗೌಡ ವೆಂಕನಗೌಡ ಪಾಟೀಲ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಅಶೋಕ ಕಬ್ಬೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

