ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪಿಎಚ್.ಡಿ, ಎಂ.ಫಿಲ್ ಫೆಲೋಶಿಪ್ ಅರ್ಜಿ ಅವಧಿ ನ.30ರವರೆಗೆ ವಿಸ್ತರಣೆ

Spread the love


ಧಾರವಾಡ:ಜಿಲ್ಲೆಯಲ್ಲಿನ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಬಂದಿದೆ. 2025-26ನೇ ಸಾಲಿಗೆ ಪಿಎಚ್.ಡಿ ಮತ್ತು ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್ (ಜೆ.ಆರ್.ಎಫ್ ಮಾದರಿ) ನೀಡಲು ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30, 2025 ರವರೆಗೆ ವಿಸ್ತರಿಸಲಾಗಿದೆ.

ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಕೆ ಕಡ್ಡಾಯ
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಸೇವಾ ಸಿಂಧು ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಅಭ್ಯರ್ಥಿಗಳು https://sevasindhu.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅದರ ಹಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಾರ್ಯಾಲಯಕ್ಕೆ ಸಲ್ಲಿಸಬೇಕು.

ಫೆಲೋಶಿಪ್ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆಗಳಾದ 0836-2971590 ಅಥವಾ 9606977589 ಗೆ ಸಂಪರ್ಕಿಸಬಹುದಾಗಿದೆ. ಅಲ್ಲದೆ, ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 8277799990 (24*7) ಮೂಲಕವೂ ಮಾಹಿತಿ ಪಡೆದುಕೊಳ್ಳಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *