ಗುಜರಾತ:ಪಾವಗಢದಲ್ಲಿ ರೋಪ್‌ವೇ ದುರಂತ: ಆರು ಕಾರ್ಮಿಕರು ದುರ್ಮರಣ

Spread the love

ಗುಜರಾತ್: ಪ್ರಸಿದ್ಧ ಯಾತ್ರಾಸ್ಥಳವಾದ ಪಾವಗಢದಲ್ಲಿ ರೋಪ್‌ವೇ ನಿರ್ಮಾಣ ಕಾರ್ಯಕ್ಕೆ ಬಳಸುತ್ತಿದ್ದ ಸರಕು ಸಾಗಣೆ ಟ್ರಾಲಿಯ ವೈಯರ್ ತುಂಡಾಗಿ ಬಿದ್ದ ಪರಿಣಾಮ ಆರು ಮಂದಿ ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಈ ದುರಂತ ಇಡೀ ಪ್ರದೇಶದಲ್ಲಿ ಆತಂಕ ಮತ್ತು ಶೋಕದ ವಾತಾವರಣ ಸೃಷ್ಟಿಸಿದೆ.

ಪಂಚಮಹಲ್ ಪೊಲೀಸ್ ಉಪ ವರಿಷ್ಠಾಧಿಕಾರಿ ಹರ್ಷ ದುಧಾತ್ ಅವರು ನೀಡಿರುವ ಮಾಹಿತಿ ಪ್ರಕಾರ, ರೋಪ್‌ವೇ ನಿರ್ಮಾಣಕ್ಕೆ ಅಗತ್ಯವಾದ ಸಾಮಗ್ರಿಗಳನ್ನು ಸಾಗಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ತಾಂತ್ರಿಕ ದೋಷ ಅಥವಾ ತೂಕದ ಕಾರಣದಿಂದಾಗಿ ಟ್ರಾಲಿಯು ನಿಯಂತ್ರಣ ಕಳೆದುಕೊಂಡು ಮುರಿದು ಬಿದ್ದಿದೆ. ಇದರ ಪರಿಣಾಮವಾಗಿ ಇಬ್ಬರು ಲಿಫ್ಟ್ ಆಪರೇಟರ್‌ಗಳು, ಇಬ್ಬರು ಕಾರ್ಮಿಕರು ಮತ್ತು ಇತರ ಇಬ್ಬರು ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ.

ಘಟನೆ ನಡೆದ ತಕ್ಷಣ ಸ್ಥಳೀಯ ಆಡಳಿತ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ನಿರ್ಮಾಣ ಸಂಸ್ಥೆಯ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣವೇ ಎಂಬುದರ ಕುರಿತು ಪರಿಶೀಲಿಸಲಾಗುತ್ತಿದೆ.

ಇಂತಹ ದುರ್ಘಟನೆಗಳು ಮರುಕಳಿಸದಂತೆ ರೋಪ್‌ವೇ ನಿರ್ಮಾಣದಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸ್ಥಳಿಯರು ಆಗ್ರಹಿಸಲಾಗಿದೆ.

Leave a Reply

Your email address will not be published. Required fields are marked *