ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಪಡೆದ ಶಿಕ್ಷಕ ಗುರುನಾಥ್ ಸೈದಾಪುರ

Spread the love

ಧಾರವಾಡ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಕೊಡಮಾಡುವ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಲಘಟಗಿ ತಾಲ್ಲೂಕಿನ ದಾಸ್ತಿಕೋಪ್ಪ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದ ದೈಹಿಕ ಶಿಕ್ಷಕ ಗುರುನಾಥ್ ಸೈದಾಪುರ ಆಯ್ಕೆಯಾಗಿದ್ದಾರೆ.

ಶಿಕ್ಷಕ ದಿನಾಚರಣೆ ಅಂಗವಾಗಿ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರಿಂದ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಇಓ ಗಾಯತ್ರಿದೇವಿ ಸಜ್ಜನ್ ಸೇರಿದಂತೆ ವಿವಿಧ ಶಿಕ್ಷಕರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಗುರುನಾಥ್ ಸೈದಾಪುರ ಅವರ ಶೈಕ್ಷಣಿಕ ಸೇವೆ ಮತ್ತು ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ನೀಡಿರುವ ವಿಶೇಷ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *