

ರಾಷ್ಟ್ರೀಯ ಅಹಿಂದ ಸಂಘಟನೆಯ ಹಾವೇರಿ ಜಿಲ್ಲಾ ಕಾರ್ಮಿಕರ ಅಧ್ಯಕ್ಷರಾಗಿ ಅಬ್ಬಾಸ್ ಅಲಿ ರಾಣೆಬೆನ್ನೂರು ನೇಮಕ
ಹಾವೇರಿ: ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಘಟಕವು ಹಾವೇರಿ ಜಿಲ್ಲಾ ಕಾರ್ಮಿಕರ ವಿಭಾಗದ ಅಧ್ಯಕ್ಷರನ್ನಾಗಿ ಸಮಾಜ ಸೇವಕರಾದ ಅಬ್ಬಾಸ್ ಅಲಿ ಅವರನ್ನು ನೇಮಕ ಮಾಡಿದೆ. ರಾಜ್ಯ ಅಧ್ಯಕ್ಷರಾದ ಶ್ರೀ ಮುತ್ತಣ್ಣ ಎಸ್. ಶಿವಳ್ಳಿ ಅವರ ಆದೇಶದ ಮೇರೆಗೆ ಈ ನೇಮಕಾತಿ ನಡೆದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇಮಕಾತಿ ಪತ್ರದಲ್ಲಿ, ಅಬ್ಬಾಸ್ ಅಲಿ ಅವರು ಅಹಿಂದ ಸಮುದಾಯಗಳ ಜಾತ್ಯತೀತ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಹಕ್ಕುಗಳ ರಕ್ಷಣೆಗಾಗಿ ನ್ಯಾಯಯುತವಾಗಿ ಶ್ರಮಿಸಬೇಕು ಎಂದು ಸೂಚಿಸಲಾಗಿದೆ. ಅಲ್ಲದೆ, ಸಂಘಟನೆಯನ್ನು ಜಿಲ್ಲೆಯಲ್ಲಿ ಬಲಪಡಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.
ಅಬ್ಬಾಸ್ ಅಲಿ ಅವರ ನೇಮಕಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರೊ. ಬೀರಲಿಂಗೇಶ್ವರ ಪೂಜಾರಿ, ರಾಜ್ಯ ಕಾರ್ಯದರ್ಶಿ ಶ್ರೀ ಗುರುವನಗೌಡ ಎಸ್. ಪಾಟೀಲ್ ಹಾಗೂ ಸಂಘಟನೆಯ ಎಲ್ಲ ಪದಾಧಿಕಾರಿಗಳು ಮತ್ತು ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಈ ನೇಮಕಾತಿಯು ಜಿಲ್ಲೆಯಲ್ಲಿ ಅಹಿಂದ ಸಂಘಟನೆಯ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡುವ ನಿರೀಕ್ಷೆಯಿದೆ.

