ಕರ್ನಾಟಕ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಮುಹೂರ್ತ ಪಿಕ್ಸ (ಡಿಸೆಂಬರ್ 8 ರಿಂದ 19)

Spread the love

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 8 ರಿಂದ 10 ದಿನಗಳ ಕಾಲ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಈ ಸಚಿವ ಸಂಪುಟ ಸಭೆಯಲ್ಲಿ ಡಿಸೆಂಬರ್ 8 ರಿಂದ 10 ದಿನ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ನಿರ್ಧಾರ ಮಾಡಲಾಯಿತು.

​ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಡಿಸೆಂಬರ್ 8 ರಿಂದ ಡಿಸೆಂಬರ್ 19 ರವರೆಗೆ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಒಟ್ಟಾರೆಯಾಗಿ 10 ದಿನಗಳ ಕಾಲ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *