ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆ ಮೇಲಿನ ದೌರ್ಜನ್ಯ ಪ್ರಕರಣ: ಕೇಶ್ವಾಪುರ ಇನ್‌ಸ್ಪೆಕ್ಟರ್ ಎತ್ತಂಗಡಿ

Spread the love

ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತೆ ಸುಜಾತ ಅವರಿಗೆ ಸಂಬಂಧಿಸಿದ ವಿವಸ್ತ್ರ ಪ್ರಕರಣ ಹಾಗೂ ಪೊಲೀಸ್ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಪೊಲೀಸ್ ಇಲಾಖೆಯು ಕಠಿಣ ಕ್ರಮಕ್ಕೆ ಮುಂದಾಗಿದೆ. ಕೇಶ್ವಾಪುರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಎಸ್.ಕೆ. ಹಟ್ಟಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎತ್ತಂಗಡಿ ಮಾಡಲಾಗಿದೆ.

​ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಹೇಳಿದ ಆದೇಶನ್ವಯ ಎಸ್.ಕೆ. ಹಟ್ಟಿ ಅವರಿಗೆ ತಕ್ಷಣವೇ ಕಮಿಷನರ್ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಕೇಶ್ವಾಪುರ ಠಾಣೆಯ ತೆರವಾದ ಇನ್‌ಸ್ಪೆಕ್ಟರ್ ಸ್ಥಾನಕ್ಕೆ ಘಂಟಿಕೇರಿ ಪೊಲೀಸ್ ಇನ್‌ಸ್ಪೆಕ್ಟರ್ ಜಾಧವ್ ಅವರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ.

ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ:

ಪ್ರಕರಣವು ರಾಷ್ಟ್ರೀಯ ಮಹಿಳಾ ಆಯೋಗದ ಗಮನ ಸೆಳೆದಿರುವ ಬೆನ್ನಲ್ಲೇ, ಸುಜಾತ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಸಮಗ್ರ ತನಿಖೆಗಾಗಿ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಮಟ್ಟದ ಅಧಿಕಾರಿಯನ್ನು ನೇಮಿಸಲಾಗಿದೆ. ತನಿಖಾಧಿಕಾರಿಯಾಗಿ ಎಸಿಪಿ ಶಿವರಾಜ್ ಕಟಕಬಾವಿ ಅವರನ್ನು ನಿಯೋಜಿಸಲಾಗಿದ್ದು, ಇಡೀ ಪ್ರಕರಣದ ತನಿಖೆಯನ್ನು ಅತ್ಯಂತ ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವಂತೆ ಆಯುಕ್ತರು ಸೂಚಿಸಿದ್ದಾರೆ.

​ಮಹಿಳಾ ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ದೌರ್ಜನ್ಯ ನಡೆದಿದೆ ಎಂಬ ವಿಡಿಯೋ ಸಾಕ್ಷ್ಯಗಳು ವೈರಲ್ ಆದ ಬೆನ್ನಲ್ಲೇ ಈ ಆಡಳಿತಾತ್ಮಕ ಬದಲಾವಣೆಗಳು ನಡೆದಿದ್ದು, ಪೊಲೀಸ್ ಇಲಾಖೆಯ ಕ್ರಮವು ತೀವ್ರ ಕುತೂಹಲ ಕೆರಳಿಸಿದೆ.

Leave a Reply

Your email address will not be published. Required fields are marked *