
ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿಗ್ಗಾಂವಿ ಪ್ಲಾಟ್‌ನಲ್ಲಿ ಯುವತಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಪುಂಡನಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದು ಬುದ್ಧಿ ಕಲಿಸಿದ ಘಟನೆ ನಡೆದಿದೆ.
ಸ್ಥಳೀಯ ಸಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ, ಅದೇ ಬಡಾವಣೆಯ ಯುವತಿಯನ್ನು ಸತತವಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ. ವಿಷಯ ತಿಳಿದ ಯುವತಿಯ ಪೋಷಕರು ಹಾಗೂ ಸ್ಥಳೀಯ ಮಹಿಳೆ ಆತನನ್ನು ರಸ್ತೆಗೆ ಎಳೆದು ತಂದು ಧರ್ಮದೇಟು ನೀಡಿದ್ದಾರೆ. ಸದ್ಯ ಆರೋಪಿಯನ್ನು ವಿದ್ಯಾನಗರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

