ಗುರುವಾರ, 26 Nov 2026 | ಕರ್ನಾಟಕ & ರಾಷ್ಟ್ರೀಯ ಸುದ್ದಿ ಪೋರ್ಟಲ್
ಗುರುವಾರ, 26 Nov 2026 ವಿಶ್ವಾಸಾರ್ಹ ಕನ್ನಡ & ರಾಷ್ಟ್ರೀಯ ಸುದ್ದಿ ಜಾಲ
Dharwad

ಎಲ್ಲರೂ ಸಂವಿಧಾನದ ಆಶಯಗಳನ್ನು ಅಳವಡಿಸಿಕೊಳ್ಳಬೇಕು : ಸಂತೋಷ್‌ ಹುಬ್ಬಳ್ಳಿ

30-ಸೆಕೆಂಡ್ ಮುಖ್ಯಾಂಶಗಳು (30-Sec AI Summary)
  • ಪ್ರಮುಖ ಬೆಳವಣಿಗೆ: ಎಲ್ಲರೂ ಸಂವಿಧಾನದ ಆಶಯಗಳನ್ನು ಅಳವಡಿಸಿಕೊಳ್ಳಬೇಕು : ಸಂತೋಷ್‌ ಹುಬ್ಬಳ್ಳಿ
  • Spread the loveನವಲಗುಂದ : ಭಾರತೀಯ ಸಂವಿಧಾನವು ವಿಶ್ವದ ಅತ್ಯಂತ ಶ್ರೇಷ್ಠ ಸಂವಿಧಾನಗಳಲ್ಲಿ ಒಂದಾಗಿದೆ. ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ…
  • ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮತ್ತು ಸ್ಥಳೀಯ ಮೂಲಗಳಿಂದ ಸಮಗ್ರ ವರದಿ ಪರಿಶೀಲನೆ.
ಸುದ್ದಿ ಆಲಿಸಿ • ಸಿದ್ಧವಾಗಿದೆ (Ready)
AI ಆಡಿಯೋ ನ್ಯೂಸ್‌ರೂಮ್ • ಕನ್ನಡ & English
ವೇಗ:
Spread the love

ನವಲಗುಂದ : ಭಾರತೀಯ ಸಂವಿಧಾನವು ವಿಶ್ವದ ಅತ್ಯಂತ ಶ್ರೇಷ್ಠ ಸಂವಿಧಾನಗಳಲ್ಲಿ ಒಂದಾಗಿದೆ. ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ ಹಕ್ಕುಗಳನ್ನು ನೀಡಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ, ಪರಿಶ್ರಮ ಮತ್ತು ಸಂವಿಧಾನ ರಚನಾ ಸಮಿತಿಯ ಕೊಡುಗೆಯಿಂದ ಭಾರತದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ದೊರೆತಿದೆ ಎಂದು ನಲಗುಂದ ಪ್ರಥಮ‌ ದರ್ಜೆ ಕಾಲೇಜಿನ ಸಾಂಸ್ಕೃತಿಕ ವಿಭಾಗದ ಸಂಚಾಲಕರಾದ ಸಂತೋಷ್‌ ಹುಬ್ಬಳ್ಳಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಂವಿಧಾನದ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, “ವಿದ್ಯಾರ್ಥಿಗಳು ಸಂವಿಧಾನದ ಮೂಲಭೂತ ಹಕ್ಕುಗಳ ಜೊತೆಗೆ ಮೂಲಭೂತ ಕರ್ತವ್ಯಗಳ ಬಗ್ಗೆಯೂ ಅರಿವು ಹೊಂದಿ ಜವಾಬ್ದಾರಿಯುತ ನಾಗರಿಕರಾಗಬೇಕು” ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಗ್ರೇಡ್-1 ಪ್ರಾಂಶುಪಾಲರಾದ ಡಾ. ಎಂ.ಬಿ.ಬಾಗಡಿ ಅವರು ಮಾತನಾಡಿ, “ಸಂವಿಧಾನವು ಕೇವಲ ಕಾನೂನುಗಳ ಪುಸ್ತಕವಲ್ಲ, ಅದು ನಮ್ಮ ದೇಶದ ಪ್ರಜಾಪ್ರಭುತ್ವದ ಆತ್ಮವಾಗಿದೆ. ಸಂವಿಧಾನದ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿರುವ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜಾತಿ, ಧರ್ಮ, ಭಾಷೆ ಹಾಗೂ ಪ್ರಾಂತ್ಯಗಳ ಭೇದಭಾವವಿಲ್ಲದೆ ಎಲ್ಲರೂ ಸಹಬಾಳ್ವೆಯಿಂದ ಬದುಕುವುದೇ ಸಂವಿಧಾನದ ನಿಜವಾದ ಆಶಯವಾಗಿದೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾರತೀಯ ಸಂವಿಧಾನದ ಪ್ರಸ್ತಾವನೆಯನ್ನು ಸಾಮೂಹಿಕವಾಗಿ ವಾಚನ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಸಂವಿಧಾನದ ರಚನೆ, ಮೂಲಭೂತ ಹಕ್ಕುಗಳು, ಕರ್ತವ್ಯಗಳು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ADVERTISEMENT