ಕರಾಟೆ ಸ್ವರ್ದೆಯಲ್ಲಿ ಹುಬ್ಬಳ್ಳಿಯ ವಿದ್ಯಾರ್ಥಿ ಯೋಗೇಶ ಲಮಾಣಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Spread the love

ಕರಾಟೆ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ವಿದ್ಯಾರ್ಥಿ ಯೋಗೇಶ್ ಲಮಾಣಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಹುಬ್ಬಳ್ಳಿ: ನಗರದ ಲ್ಯಾಮಿಂಗ್ಟನ್ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿ ಯೋಗೇಶ್ ಲಮಾಣಿ ಅವರು ಹುಬ್ಬಳ್ಳಿ ಶಹರ ವಲಯದ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಹೆಮ್ಮೆ ತಂದಿದ್ದಾರೆ.
ಕಳೆದ ವಾರ ನಡೆದ ಈ ಸ್ಪರ್ಧೆಯಲ್ಲಿ, ಹುಬ್ಬಳ್ಳಿ ನಗರ ವ್ಯಾಪ್ತಿಯ ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಯೋಗೇಶ್ ತನ್ನ ಅಸಾಧಾರಣ ಕೌಶಲ್ಯ ಮತ್ತು ಆತ್ಮವಿಶ್ವಾಸದಿಂದ ಎಲ್ಲರನ್ನು ಹಿಂದಿಕ್ಕಿ ಪ್ರಥಮ ಸ್ಥಾನ ಗಳಿಸಿದರು. ಈ ವಿಜಯವು ಆತನ ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವಕ್ಕೆ ಸಂದ ಗೌರವವಾಗಿದೆ.
ಯೋಗೇಶ್ ಲಮಾಣಿಯ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರಾದ ಎನ್. ಚಿ. ದೇಶನೂರ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. “ಯೋಗೇಶ್ ಶಾಲೆಯ ಕರಾಟೆ ತಂಡದ ಪ್ರತಿಭಾವಂತ ವಿದ್ಯಾರ್ಥಿ. ಈತ ಜಿಲ್ಲಾ ಮಟ್ಟದಲ್ಲೂ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ವಿಶ್ವಾಸವಿದೆ” ಎಂದು ತಿಳಿಸಿದರು. ಕ್ರೀಡಾ ಶಿಕ್ಷಕರಾದ ಡಿ. ಜಿ. ಜಾಧವ ಅವರು ಯೋಗೇಶ್ ಅವರಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದಾರೆ. ಶಾಲೆಯ ಎಲ್ಲ ಶಿಕ್ಷಕರು, ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಯೋಗೇಶ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಯೋಗೇಶ್ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಉತ್ಸುಕನಾಗಿದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಲು ಸಿದ್ಧತೆ ನಡೆಸಿದ್ದಾನೆ. ಆತನ ಈ ಸಾಧನೆಯು ಶಾಲೆಯ ಇತರ ವಿದ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೇರಣೆಯಾಗಿದೆ.

Leave a Reply

Your email address will not be published. Required fields are marked *