
ಛಬ್ಬಿ ಗ್ರಾಮದಲ್ಲಿ ನೂತನ ಸರ್ಕಾರಿ ಪ್ರೌಢಶಾಲೆ ಉದ್ಘಾಟನೆ: ಪ್ರಹ್ಲಾದ್ ಜೋಶಿ, ಮಧು ಬಂಗಾರಪ್ಪ ಭಾಗಿ
ಹುಬ್ಬಳ್ಳಿ: ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಸರ್ಕಾರಿ ಪ್ರೌಢಶಾಲೆಯ ಉದ್ಘಾಟನಾ ಸಮಾರಂಭವನ್ನು ಇಂದು ಬೆಳಿಗ್ಗೆ 11ಕ್ಕೆ ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಈ ಸಮಾರಂಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಸಚಿವರು ಹಾಗೂ ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರದ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಇಲಾಖೆ ಸಚಿವ ಶ್ರೀ ಮಧು ಬಂಗಾರಪ್ಪ ಅವರು ಶಾಲೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಮಿಕ ಸಚಿವ ಶ್ರೀ ಸಂತೋಷ ಲಾಡ್ ಕೂಡ ಸಮಾರಂಭದಲ್ಲಿ ಭಾಗವಹಿಸುವರು.
ಸ್ಥಳೀಯ ಶಾಸಕ ಎಂ.ಆರ್. ಪಾಟೀಲ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಶ್ರೀ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪತ್ರಕರ್ತ ಅಜಿತ್ ಹನುಮಕ್ಕನವರ್, ಛಬ್ಬಿ ಗ್ರಾಮ ಪಂಚಾಯತ್ ಅಧ್ಯಕ್ಷ ರವಿ ಹುಲ್ಲಂಬಿ, ಉಪಾಧ್ಯಕ್ಷೆ ರಸೂಲಭಿ ಹುಬ್ಬಳ್ಳಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಈ ನೂತನ ಶಾಲೆಯು ಗ್ರಾಮದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಅವಕಾಶಗಳನ್ನು ಒದಗಿಸುವ ನಿರೀಕ್ಷೆ ಗ್ರಾಮಸ್ಥರಲ್ಲಿ ಮನೆ ಮಾಡಿರುವದು ವಿಷೇಶ,

