ಜೀರಂಗಿ’ ಕವನ ಸಂಕಲನ ಬಿಡುಗಡೆ: ಮೊಬೈಲ್ ಬದಿಗಿಟ್ಟು ಪುಸ್ತಕ ಓದಲು ಡಾ. ಲಿಂಗರಾಜ ಅಂಗಡಿ ಕರೆ

Spread the love

ಹುಬ್ಬಳ್ಳಿ: ಯುವ ಪೀಳಿಗೆಯಲ್ಲಿ ಹೆಚ್ಚುತ್ತಿರುವ ಮೊಬೈಲ್ ವ್ಯಾಮೋಹವನ್ನು ಕಡಿಮೆ ಮಾಡಿ, ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಹುಬ್ಬಳ್ಳಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಅವರು ಕರೆ ನೀಡಿದರು. ಶನಿವಾರದಂದು ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಸವರಾಜ ಬಂಡಿವಾಡ ಅವರ ‘ಜೀರಂಗಿ’ ಕವನ ಸಂಕಲನವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಹೆಚ್ಚು ಪುಸ್ತಕಗಳನ್ನು ಓದುವುದರಿಂದ ಜ್ಞಾನಾರ್ಜನೆಯ ಜೊತೆಗೆ ವಿಚಾರಶಕ್ತಿ ಮತ್ತು ಸೃಜನಶೀಲತೆ ಹೆಚ್ಚುತ್ತದೆ. ಆದ್ದರಿಂದ ಪ್ರತಿ ಮನೆಯಲ್ಲಿಯೂ ಮೊಬೈಲ್‌ಗೆ ನೀಡುವ ಪ್ರಾಮುಖ್ಯತೆಗಿಂತ ಪುಸ್ತಕಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಡಾ. ಅಂಗಡಿ ಒತ್ತಿ ಹೇಳಿದರು.
ಈ ಕಾರ್ಯಕ್ರಮದಲ್ಲಿ
ಹುಬ್ಬಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬಮ್ಮಕ್ಕನವರ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಡಾ. ಮಲ್ಲಿಕಾರ್ಜುನ ಕುಂಬಾರ ಅವರು ವಹಿಸಿದ್ದರು. 51ನೇ ವಾರ್ಡಿನ ಪಾಲಿಕೆ ಸದಸ್ಯ ಸಂದೀಲ್ ಕುಮಾರ್ ಎಸ್. ಮತ್ತು ಕುಂದಗೋಳ ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲಕ್ಕನಗೌಡರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶಂಕರಗೌಡ ಕುರಹಟ್ಟಿ ಅವರು ಲೇಖಕ ಬಸವರಾಜ ಬಂಡಿವಾಡ ಹಾಗೂ ಅವರ ‘ಜೀರಂಗಿ’ ಕವನ ಸಂಕಲನದ ಪರಿಚಯ ಮಾಡಿಕೊಟ್ಟರು. ಕೊನೆಯಲ್ಲಿ ಶ್ರೀ ಮಲ್ಲಪ್ಪ ಸೊರಟಿ ಅವರು ವಂದನಾರ್ಪಣೆ ಸಲ್ಲಿಸಿದರು. ಈ ಸಾಹಿತ್ಯಿಕ ಕಾರ್ಯಕ್ರಮದಲ್ಲಿ ಸಾಹಿತ್ಯ ಪ್ರೇಮಿಗಳು ಹಾಗೂ ಇತರರು ಭಾಗವಹಿದ್ದರು.

Leave a Reply

Your email address will not be published. Required fields are marked *