ಧಾರವಾಡ: ನ. 5: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಯಿಂದ ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ ನವೆಂಬರ್ 7, 2025 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ನಗರ ಸಾರಿಗೆಗೆ ಹೊಸ ಚೈತನ್ಯ ನೀಡುವ ಈ ನಿಲ್ದಾಣದ ಉದ್ಘಾಟನೆಗೆ ರಾಜ್ಯ ಮತ್ತು ಕೇಂದ್ರದ ಅನೇಕ ಗಣ್ಯರು ಹಾಜರಾಗಲಿದ್ದಾರೆ.
ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮತ್ತು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಕಾರ್ಮಿಕ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಬಸ್ ನಿಲ್ದಾಣವನ್ನು ಉದ್ಘಾಟಿಸುವರು.
ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು. ಶಾಸಕರು ಮತ್ತು ವಾಯುವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಮ್ ಪೀರ್ ಎಸ್. ಖಾದ್ರಿ ಉಪಸ್ಥಿತರಿರುತ್ತಾರೆ. ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ವಿನಯ ಕುಲಕರ್ಣಿ, ಎನ್.ಎಚ್. ಕೋನರಡ್ಡಿ, ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ಎಂ.ಆರ್. ಪಾಟೀಲ್, ಎಫ್.ಹೆಚ್. ಜಕಪ್ಪನವರ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಹುಬ್ಬಳ್ಳಿ–ಧಾರವಾಡ ಮಹಾನಗರ ಮಹಾಪೌರ ಜ್ಯೋತಿ ಪಾಟೀಲ, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ನಾಗೇಂದ್ರ ಕುಮಾರ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಸುನೀಲ ಹಣಮನ್ನವರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಸ್.ಆರ್. ಪಾಟೀಲ್ ಹಾಗೂ ಹುಬ್ಬಳ್ಳಿ–ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಬೆಂಗಳೂರು ಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಕೆ.ಬಿ., ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಶಾ, ನಗರ ಭೂ ಸಾರಿಗೆ ನಿರ್ದೇಶನಾಲಯ ಆಯುಕ್ತೆ ದೀಪಾ ಚೋಳನ್, ಜಿಲ್ಲಾಧಿಕಾರಿ ದಿವ್ಯ ಪ್ರಭು, ಉತ್ತರ ವಲಯದ ಆರಕ್ಷಕ ಮಹಾನಿರೀಕ್ಷಕ ಡಾ. ಚೆತನಸಿಂಗ್ ರಾಠೋರ, ಹುಬ್ಬಳ್ಳಿ–ಧಾರವಾಡ ಪೆÇಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಟೀಲ ಭುವನೇಶ ದೇವಿದಾಸ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಹಾಗೂ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಎಸ್. ಘಾಳಿ ಭಾಗವಹಿಸಲಿದ್ದಾರೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

