ಪದಕ ವಿಜೇತ ಪರಿಶಿಷ್ಟ ಜಾತಿ/ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

Spread the love

ಧಾರವಾಡ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ೨೦೨೫-೨೬ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ, ಅಧಿಕೃತ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

​೨೦೨೪ನೇ ಕ್ಯಾಲೆಂಡರ್ ವರ್ಷದಲ್ಲಿ (ದಿನಾಂಕ: ೦೧-೦೧-೨೦೨೪ ರಿಂದ ೩೧-೧೨-೨೦೨೪ ರವರೆಗೆ) ನಡೆದ ಅಧಿಕೃತ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.

​ಆಸಕ್ತ ಮತ್ತು ಅರ್ಹ ಕ್ರೀಡಾಪಟುಗಳು ಸರ್ಕಾರದ ಸೇವಾ ಸಿಂಧು ಜಾಲತಾಣ https://sevasindhu.karnataka.gov.in ಮೂಲಕ ಜನವರಿ ೩೧, ೨೦೨೬ ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ ೦೮೩೬-೨೪೪೭೪೨೪ ಗೆ ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *