ಕಬಡ್ಡಿ ಕ್ರೀಡಾಕೂಟ: ಧಾರವಾಡ ಜಿಲ್ಲಾ ಮಟ್ಟದ ಸ್ಪರ್ಧೆ – ಶಲವಡಿಯಲ್ಲಿ ವಿದ್ಯಾರ್ಥಿಗಳ ಜಿದ್ದಾಜಿದ್ದಿ

Spread the love

ಕಬಡ್ಡಿ ಕ್ರೀಡಾಕೂಟ: ಧಾರವಾಡ ಜಿಲ್ಲಾ ಮಟ್ಟದ ಸ್ಪರ್ಧೆ – ಶಲವಡಿಯಲ್ಲಿ ವಿದ್ಯಾರ್ಥಿಗಳ ಜಿದ್ದಾಜಿದ್ದಿ

ನವಲಗುಂದ: ಧಾರವಾಡ ಜಿಲ್ಲೆಯ ಎಲ್ಲ ತಾಲ್ಲೂಕುಗಳ 14 ಹಾಗೂ 17 ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಬಡ್ಡಿ ಕ್ರೀಡಾಕೂಟವು ನವಲಗುಂದ ಸಮೀಪದ ಶಲವಡಿ ಗ್ರಾಮದ ಶ್ರೀ ಗುರುಶಾಂತೇಶ್ವರ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ತಮ್ಮ ಕೌಶಲ್ಯ ಪ್ರದರ್ಶಿಸಿದರು.

ಗ್ರಾಮ ಪಂಚಾಯತಿ ಅಧ್ಯಕ್ಷರಿಂದ ಉದ್ಘಾಟನೆ
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾಜಬೇಗಂ ಎಚ್. ಯಾವಗಲ್ ಅವರು ವಿದ್ಯಾರ್ಥಿಗಳಿಂದ ಪ್ರಾರ್ಥನೆ ಹಾಗೂ ನಾಡಗೀತೆಯೊಂದಿಗೆ ಕ್ರೀಡಾಕೂಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿ ಅನುಶ್ರೀ ಪತ್ತಾರ ಭರತನಾಟ್ಯ ಪ್ರದರ್ಶನ ನೀಡಿ ನೆರೆದಿದ್ದವರ ಗಮನ ಸೆಳೆದರು.

ಸಾನಿಧ್ಯ ವಹಿಸಿದ್ದ ಸ್ವಾಮೀಜಿ
ಶಲವಡಿ ವಿರಕ್ತಮಠದ ಗುರುಶಾಂತೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಕ್ರೀಡಾಕೂಟಕ್ಕೆ ಶುಭ ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರಶಿಕ್ಷಣಾಧಿಕಾರಿ ಎಸ್.ಬಿ. ಮಲ್ಲಾಡ ಅವರು ವಹಿಸಿದ್ದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಆರ್.ಎಚ್. ನೇಗಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಧ್ವಜಾರೋಹಣ ಮತ್ತು ಪ್ರತಿಜ್ಞಾವಿಧಿ
ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ನವಲಗುಂದ ತಾಲ್ಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕ ಎನ್.ವಿ. ಕುರುವತ್ತಿಮಠ ಅವರು ಸ್ವಾಗತಿಸಿದರು. ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಉಮೇಶ ಶಿರೋಳ ಅವರು ಒಲಂಪಿಕ್ ಧ್ವಜಾರೋಹಣ ನೆರವೇರಿಸಿದರು. ದೈಹಿಕ ಶಿಕ್ಷಕ ಆರ್.ಎಸ್. ಕೋರಿಮಠ ಅವರು ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಕಬಡ್ಡಿ ಕ್ರೀಡಾಕೂಟದಲ್ಲಿ ಒಟ್ಟು 28 ತಂಡಗಳು ಭಾಗವಹಿಸಿ, ತೀವ್ರ ಜಿದ್ದಾಜಿದ್ದಿಯಲ್ಲಿ ತಮ್ಮ ಬಲಾಬಲ ಪ್ರದರ್ಶಿಸಿದರು.

Leave a Reply

Your email address will not be published. Required fields are marked *