
ಕಲಘಟಗಿ: ಉಪ ನಿರ್ದೇಶಕರ ಕಚೇರಿ (ಶಾಲಾ ಶಿಕ್ಷಣ ಮತ್ತು ಪದವಿ ಪೂರ್ವ ಇಲಾಖೆ), ಧಾರವಾಡ, ಹಾಗೂ ಗುಡ್ ನ್ಯೂಸ್ ಪದವಿಪೂರ್ವ ಮಹಾವಿದ್ಯಾಲಯದ ಸಹಯೋಗದಲ್ಲಿ ನಡೆದ ಧಾರವಾಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾವಳಿಯಲ್ಲಿ, ಗುಡ್ ನ್ಯೂಸ್ ಪದವಿಪೂರ್ವ ಮಹಾವಿದ್ಯಾಲಯದ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ಶನಿವಾರ ನಡೆದ ಈ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಗುಡ್ ನ್ಯೂಸ್ ತಂಡವು ಪ್ರಶಸ್ತಿ ಗೆಲ್ಲುವ ಮೂಲಕ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದೆ. ವಿದ್ಯಾರ್ಥಿನಿಯರ ಈ ಸಾಧನೆಯನ್ನು ಕಾಲೇಜಿನ ಆಡಳಿತ ಅಧಿಕಾರಿಗಳಾದ ವಂದನೀಯ ಬ್ರದರ್ ವರ್ಗೀಸ್ ಕೆ.ಜೆ., ಖಜಾಂಚಿಗಳಾದ ವಂದನೀಯ ಬ್ರದರ್ ಅರುಳಾನಂದಂ, ಪ್ರಾಚಾರ್ಯರಾದ ಶ್ರೀಮತಿ ನವೀನಾ ರೆಡ್ಡಿ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕ ಶ್ರೀ ರಾಮು ಲಮಾಣಿ ಅವರು ಶ್ಲಾಘಿಸಿದ್ದಾರೆ.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಸಾಧನೆಗೈದ ವಿದ್ಯಾರ್ಥಿನಿಯರಿಗೆ ಅಭಿನಂದನೆ ಸಲ್ಲಿಸಿ, ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಯಶಸ್ಸು ಗಳಿಸಲು ಶುಭ ಹಾರೈಸಿದ್ದಾರೆ. ಈ ವಿಜಯವು ಕಾಲೇಜಿನ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ಮತ್ತಷ್ಟು ಉತ್ತೇಜನ ನೀಡಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

