ಧಾರವಾಡ: “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (KSOU) 2025-26ನೇ ಸಾಲಿನ ಜನವರಿ ಆವೃತ್ತಿಯ ವಿವಿಧ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ರೆಗ್ಯುಲರ್ ವಿಶ್ವವಿದ್ಯಾನಿಲಯಗಳ ಶಿಕ್ಷಣಕ್ಕೆ ಸರಿಸಮನಾದ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಈ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದ್ದು, 10+2 (ಪಿಯುಸಿ) ಹಾಗೂ 10+2+3 (ಪದವಿ) ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಪ್ರಸಕ್ತ ಸಾಲಿನಲ್ಲಿ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ ಸೇರಿದಂತೆ ಬಿ.ಲಿಬ್.ಸೈನ್ಸ್ ಮತ್ತು ಬಿ.ಎಸ್.ಡಬ್ಲ್ಯೂ ಪದವಿಗಳಿಗೆ ಪ್ರವೇಶ ಪಡೆಯಲು ಅವಕಾಶವಿದೆ. ಅಂತೆಯೇ ಸ್ನಾತಕೋತ್ತರ ವಿಭಾಗದಲ್ಲಿ ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಎಂ.ಲಿಬ್.ಸೈನ್ಸ್, ಎಂ.ಎಸ್.ಡಬ್ಲ್ಯೂ, ಎಂ.ಸಿ.ಎ ಹಾಗೂ ವಿವಿಧ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರಥಮ ವರ್ಷದ ಪ್ರವೇಶಾತಿ ತೆರೆದಿದೆ. ಆಸಕ್ತ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ಅಂತರ್ಜಾಲ ತಾಣ www.ksoumysuru.ac.in ಮೂಲಕ ಹೆಚ್ಚಿನ ಮಾಹಿತಿ ಪಡೆಯಬಹುದು.
ಹೆಚ್ಚಿನ ವಿವರಗಳಿಗಾಗಿ ಹುಬ್ಬಳ್ಳಿಯ ನವನಗರದ ಅಮರಗೋಳ 2ನೇ ಹಂತದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರವನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ 0836-2441199 ಹಾಗೂ ಮೊಬೈಲ್ ಸಂಖ್ಯೆ 7019314679 ಗೆ ಕರೆ ಮಾಡಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

