
ಧಾರವಾಡ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಅಕ್ಟೋಬರ್ 27 ರಂದು ಆಯೋಜಿಸಲಾಗಿದ್ದ ಸ್ಪರ್ಧೆಗಳ ಸ್ಥಳವನ್ನು ಬದಲಾಯಿಸಲಾಗಿದೆ ಎಂದು ಜಿಲ್ಲಾ ಪರಿಸರ ಅಧಿಕಾರಿ ಜಗದೀಶ ಐ.ಎಚ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಡಳಿಯ ಸುವರ್ಣ ಮಹೋತ್ಸವದ ಭಾಗವಾಗಿ ಅಕ್ಟೋಬರ್ 27 ರಂದು ಬೆಳಿಗ್ಗೆ 10:30 ಗಂಟೆಗೆ ಮಹಿಳೆಯರಿಗಾಗಿ ‘ಪರಿಸರ ಸಮೂಹ ಗೀತೆ’ ಸ್ಪರ್ಧೆ ಮತ್ತು ತಾಲೂಕು ಮಟ್ಟದಲ್ಲಿ ನಡೆದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಮೊದಲು ಈ ಕಾರ್ಯಕ್ರಮವನ್ನು ಜೆ.ಎಸ್.ಎಸ್. ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಆದರೆ, ಈಗ ಈ ಕಾರ್ಯಕ್ರಮದ ಸ್ಥಳವನ್ನು ಬದಲಿಸಿ ಧಾರವಾಡದ ಶ್ರೀನಗರ ಪರಿಸರ ಭವನಕ್ಕೆ ಸ್ಥಳಾಂತರಿಸಲಾಗಿದೆ.
ಈಗಾಗಲೇ ಹೆಸರು ನೋಂದಾಯಿಸಿದ ಸ್ಪರ್ಧಿಗಳು ಮತ್ತು ವಿಜೇತರು ನಿಗದಿತ ದಿನಾಂಕ ಮತ್ತು ಸಮಯಕ್ಕೆ (ಅಕ್ಟೋಬರ್ 27 ರಂದು ಬೆಳಿಗ್ಗೆ 10:30 ಗಂಟೆಗೆ) ಶ್ರೀನಗರದ ಪರಿಸರ ಭವನಕ್ಕೆ ಹಾಜರಾಗಬೇಕೆಂದು ಮನವಿ ಮಾಡಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ನೆಹರು ನಗರ ಅಥವಾ ಶ್ರೀನಗರ ಬಸ್ ಮಾರ್ಗವಾಗಿ ಪರಿಸರ ಭವನಕ್ಕೆ ಬರಬಹುದು. ಹೆಚ್ಚಿನ ಮಾಹಿತಿಗಾಗಿ ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿ ಅಧ್ಯಕ್ಷ ಶಂಕರ ಕುಂಬಿ ಅವರನ್ನು ಮೊಬೈಲ್ ಸಂಖ್ಯೆ 9448801141 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಸರ ಅಧಿಕಾರಿ ಜಗದೀಶ ಐ.ಎಚ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

