
ಧಾರವಾಡ: ಅ.18: ಜಿಲ್ಲಾಡಳಿತ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಅಕ್ಟೋಬರ್ 23, ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್ ಸಾಂಸ್ಕೃತಿ ಭವನದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.
ಕಾರ್ಮಿಕ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರು ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ್, ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಮ್‍ಪೀರ್ ಎಸ್. ಖಾದ್ರಿ ವಿಶೇಷ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ವಿನಯ ಕುಲಕರ್ಣಿ, ಎನ್.ಎಚ್. ಕೋನರಡ್ಡಿ, ಎಸ್. ವಿ. ಹಿ. ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ್, ಎಫ್.ಹೆಚ್. ಜಕ್ಕಪ್ಪನವರು, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ನಾಗೇಂದ್ರ ಕುಮಾರ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ಜ್ಯೋತಿ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ್ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಕಿತ್ತೂರು ರಾಣಿ ಚನ್ನಮ್ಮಾಜಿ ಪ್ರತಿಷ್ಠಾನದ ಜಿಲ್ಲಾಧ್ಯಕ್ಷರು, ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿರುವರು. ದಾಂಡೇಲಿ ಸರ್ಕಾರಿ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಮತ್ತು ಬೆಳಗಾವಿ ಡಾ. ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ ಅಧ್ಯಕ್ಷೆ ಡಾ. ವಿನಯಾ ಒಕ್ಕುಂದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡುವರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಎಸ್. ಘಾಳಿ ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

