ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಕೆಪಿಸಿಸಿ ರಾಜ್ಯ ಮುಖ್ಯ ಸಂಯೋಜಕ ಶರಣಪ್ಪ ಕೋಟಗಿ

Spread the love

ಬೆಂಗಳೂರು: ಕೆಪಿಸಿಸಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ರಾಜ್ಯ ಮುಖ್ಯ ಸಂಯೋಜಕರಾದ ಶ್ರೀ ಶರಣಪ್ಪ ಕೋಟಗಿ ಅವರು ಮಂಗಳವಾರದಂದು ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿದರು.

​ಈ ಸಂದರ್ಭದಲ್ಲಿ ಶರಣಪ್ಪ ಕೋಟಗಿ ಅವರು ಮಲ್ಲಿಕಾರ್ಜುನ ಖರ್ಗೆಯವರ ಆರೋಗ್ಯ ವಿಚಾರಿಸಿ, ಅವರು ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸಿದರು.

​ಖರ್ಗೆ ಅವರ ಆರೋಗ್ಯ ವಿಚಾರಣೆ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಮಾಜಿ ಸಭಾಪತಿ ಡಾ. ವೀರಣ್ಣ ಮತ್ತಿಕಟ್ಟಿ, ಮಾಜಿ ಸಚಿವರು ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಡಿ. ಬಿ. ಜಯಚಂದ್ರ, ಪ್ರದೇಶ ಕಾಂಗ್ರೆಸ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ವಿಜಯ್ ಮತ್ತಿಕಟ್ಟಿ ಮತ್ತು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೊಂಡಜ್ಜಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *