ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ 60ನೇ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ವಿತರಣೆ, ಸಸಿ ನೆಟ್ಟು ಸಂಭ್ರಮ

Spread the love

ಮಳವಳ್ಳಿ: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ನಾರಾಯಣಗೌಡರ 60ನೇ ಹುಟ್ಟುಹಬ್ಬದ ಅಂಗವಾಗಿ ಮಳವಳ್ಳಿ ತಾಲ್ಲೂಕು ಘಟಕದ ವತಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಹಾಗೂ ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಕರವೇ ತಾಲ್ಲೂಕು ಅಧ್ಯಕ್ಷ ಅಪ್ಪೇಗೌಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಬಳಿಕ ಮಾತನಾಡಿದ ಅವರು, ಕನ್ನಡ ನಾಡು, ನುಡಿ, ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಗಾಗಿ ನಿರಂತರ ಹೋರಾಟ ನಡೆಸುತ್ತಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ 60ನೇ ವರ್ಷದ ಹುಟ್ಟುಹಬ್ಬವನ್ನು ತಾಲ್ಲೂಕು ಘಟಕದ ವತಿಯಿಂದ ವಿಶೇಷವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ನಾರಾಯಣಗೌಡರು ಇನ್ನೂ ಹೆಚ್ಚಿನ ಕಾಲ ಆರೋಗ್ಯವಂತರಾಗಿ ಕನ್ನಡದ ಪರ ಹೋರಾಟಗಳನ್ನು ಮುನ್ನಡೆಸುವ ಶಕ್ತಿ ಹಾಗೂ ಆಯುಷ್ಯವನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದರು. ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಎಲ್ಲರಿಗೂ ಮಾದರಿಯಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಮಹಿಳಾ ಅಧ್ಯಕ್ಷೆ ವಿಜಯ, ಹಲಗೂರು ಹೋಬಳಿ ಅಧ್ಯಕ್ಷ ಗಂಗರಾಜು, ಉಪಾಧ್ಯಕ್ಷ ಚನ್ನೇಗೌಡ, ತಿಮ್ಮಯ್ಯ, ಪುಟ್ಟಸ್ವಾಮಿಗೌಡ, ಸಂಪತ್ತು, ಮಾದೇಶ, ಮಹೇಶ್, ಮಹದೇವು, ನಾಗರಾಜು, ವೈ.ಆರ್. ಮಲ್ಲಿಕಾರ್ಜುನಸ್ವಾಮಿ ಸೇರಿದಂತೆ ಕರವೇ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *