
ಕುಂದಗೋಳ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಏಪ್ರಿಲ್ 4 ಶನಿವಾರದಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್. ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ನಡೆಯಲಿದೆ.
ತಾಲೂಕಿನ ರೈತ ಬಾಂಧವರು ಹಾಗೂ ಸಾರ್ವಜನಿಕರು ತಮ್ಮ ಸಮಸ್ಯೆಗಳು, ಕುಂದುಕೊರತೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಈ ಸಭೆಯಲ್ಲಿ ಸಲ್ಲಿಸಬಹುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನೇರವಾಗಿ ಚರ್ಚಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತಹಶೀಲ್ದಾರ್ ರಾಜು ಮಾವರಕರ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

